ತುಮಕೂರು:
ಕೆ.ಎನ್.ರಾಜಣ್ಣ ಅಧ್ಯಕ್ಷರಾಗಿದ್ದ ಜಿಲ್ಲಾ ಸಹಕಾರಿ ಬ್ಯಾಂಕ್(ಡಿಸಿಸಿ) ಅನ್ನು ಸರ್ಕಾರ ಸೂಪರ್ ಸೀಡ್ ಮಾಡಿ ಆದೇಶ ಹೊರಡಿಸಿದ್ದು, ತುಮಕೂರು ಜಿಲ್ಲಾಧಿಕಾರಿ ಡಾllರಾಕೇಶ್ ಕುಮಾರ್ ಅವರು ಅಧಿಕಾರ ವಹಿಸಿಕೊಂಡಿದ್ದಾರೆ.
ಜಾಯಿಂಟ್ ರಿಜಿಸ್ಟ್ರಾರ್ ಆಫ್ ಕೋ-ಆಪರೇಟಿವ್ ಸೊಸೈಟಿ ಅವರು ಆದೇಶ ಹೊರಡಿಸಿರುವುದರಿಂದ ಸರ್ಕಾರದಿಂದ ಒಂದು ವರ್ಷ ಅವಧಿಗಾಗಿ ಜಿಲ್ಲಾಧಿಕಾರಿಗಳನ್ನು ಡಿಸಿಸಿ ಬ್ಯಾಂಕಿನ ಅಡ್ಮಿನಿಸ್ಟ್ರೇಟರ್ ಆಗಿ ಜಿಲ್ಲಾಧಿಕಾರಿ ಡಾllರಾಕೇಶ್ ಕುಮಾರ್ ರವರನ್ನು ನೇಮಕ ಮಾಡಲಾಗಿದ್ದು, ನಿನ್ನೆ ಸಂಜೆ 5 ಗಂಟೆಗೆ ಅವರು ಅಧಿಕಾರ ವಹಿಸಿಕೊಂಡಿದ್ದಾರೆ.
ಜಿಲ್ಲಾಧಿಕಾರಿ ಡಾಕ್ಟರ್ ಕೆ.ರಾಕೇಶ್ ಕುಮಾರ್ ಅವರು ಪೂಜಾಕಾರ್ಯಕ್ರಮದಲ್ಲಿ ತೊಡಗಿಕೊಂಡಿರುವುದರಿಂದ ಡಿಸಿಸಿ ಬ್ಯಾಂಕ್ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಇಂದು ನೀಡಲಿದ್ದೇನೆ ಎಂದು ಅವರು ಪತ್ರಕರ್ತರಲ್ಲಿ ಮನವಿ ಮಾಡಿದ್ದಾರೆ.
‘ಇನ್ನೂ ಕೆಲವು ಶಾಸಕರು ರಾಜೀನಾಮೆ ಕೊಡುತ್ತಾರೆ, ಅವರ ಹೆಸರು ಹೇಳಲ್ಲ’ – ಕೆಎನ್ಆರ್
ಸರ್ಕಾರದಿಂದ ಒಂದು ವರ್ಷ ಅವಧಿಗಾಗಿ ಬ್ಯಾಂಕಿನ ಆಡಳಿತಾಧಿಕಾರಿಯಾಗಿ ಜಿಲ್ಲಾಧಿಕಾರಿ ಡಾ.ರಾಕೇಶ್ ಕುಮಾರ್ ಅವರು ಅಧಿಕಾರ ಸ್ವೀಕಾರ ಮಾಡಿದ್ದಾರೆ. ಸೂಪರ್ ಸೀಡ್ ಆದ ಹಿನ್ನೆಲೆಯಲ್ಲಿ ಸಂಜೆ 5 ಗಂಟೆಯಿಂದ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಸೂಪರ್ ಸೀಡ್ ಮಾಡಿರುವುದನ್ನು ಅಧಿಕೃತವಾಗಿ ವಾರ್ತಾ ಇಲಾಖೆ ತಿಳಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ