ಪೇಜಾವರ ಶ್ರೀಗಳ ನಿಧನಕ್ಕೆ ಸಂತಾಪ ಸೂಚಿಸಿದ ಸಿಎಂ ಯಡಿಯೂರಪ್ಪ

ಉಡುಪಿ:

      ಉಡುಪಿ ಪೇಜಾವರ ಮಠದ ಶ್ರೀ ವಿಶ್ವಶತೀರ್ಥ ಸ್ವಾಮೀಜಿ ಅವರ ನಿಧನಕ್ಕೆ  ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಶ್ರೀಗಳ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ. ಶ್ರೀಗಳ ಗೌರವಾರ್ಥ ರಾಜ್ಯದಲ್ಲಿ ಮೂರು ದಿನ ಶೋಕಾಚರಣೆ ಘೋಷಿಸಿದ್ದಾರೆ.  ಅನೇಕ ಗಣ್ಯರು ಶ್ರೀಗಳ ಅಗಲುವಿಕೆಗೆ ಸಂತಾಪ ಸೂಚಿಸಿದ್ದಾರೆ.

     ಪೇಜಾವರ ಶ್ರೀ ನಿಧನ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ರಾಜ್ಯದಲ್ಲಿ 3 ದಿನಗಳ ಕಾಲ ಶೋಕಾಚರಣೆ ಘೋಷಿಸಿದ್ದಾರೆ. ಸಕಲ ಸರ್ಕಾರಿ ಗೌರವದೊಂದಿಗೆ ಶ್ರೀಗಳ ಅಂತ್ಯಕ್ರಿಯೆ ನಡೆಯಲಿದ್ದು, ನಿರ್ಮಲಾ ಸೀತಾರಾಮನ್ ಸೇರಿದಂತೆ ಬಿಜೆಪಿ ಕೇಂದ್ರ ನಾಯಕರು ಅಂತಿಮ ದರ್ಶನ ಪಡೆಯಲು ಬೆಂಗಳೂರಿಗೆ ಆಗಮಿಸುವ ಸಾಧ್ಯತೆಗಳಿವೆ.

     ಬೆಂಗಳೂರಿನ ವಿದ್ಯಾಪೀಠದಲ್ಲಿ ಪೇಜಾವರ ಶ್ರೀಗಳ ಅಂತ್ಯಕ್ರಿಯೆ ನಡೆಯಲಿದೆ. ಶ್ರೀಗಳ ವೃಂದಾನವಕ್ಕೂ ಮುನ್ನ 3 ತಾಸು ಅಂತಿಮ ದರ್ಶನಕ್ಕೆ ವ್ಯವಸ್ಥೆಗೆ ಅವಕಾಶ ಮಾಡಲಾಗಿದೆ. ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಅಂತಿಮ ದರ್ಶನ ನಡೆಯಲಿದ್ದು, ಮಧ್ಯಾಹ್ನ 2 ಗಂಟೆಗೆ ವಿಶೇಷ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ರವಾನೆ ಮಾಡಲಾಗುತ್ತದೆ.

           ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap