ಬೆಂಗಳೂರು :
ದೆಹಲಿ ಪ್ರವಾಸ ಮಾಡಿ ರಾಜಧಾನಿಗೆ ವಾಪಸ್ಸಾಗಿರುವ ಸಿಎಂ ಯಡಿಯೂರಪ್ಪ ಇಂದು ಸಂಜೆ ಪ್ರವಾಹ ಪೀಡಿತ ಪ್ರದೇಶಗಳ ಪರಿಶೀಲನೆಗೆ ಬೆಳಗಾವಿಗೆ ತೆರಳಲು ಸಜ್ಜಾಗಿದ್ದಾರೆ. ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ ಬಳಿಕ ಮಾಧ್ಯಮಗಳಿಗೆ ಮಾತನಾಡಿದ ಸಿಎಂ, ಮೊದಲು ಬೆಳಗಾವಿ ನೆರೆಪೀಡಿತ ಪ್ರದೇಶಗಳಿಗೆ ಹೋಗುತ್ತಿದ್ದೇನೆ. ಅಲ್ಲಿನ ಪರಿಸ್ಥಿತಿ ಅವಲೋಕಿಸಿ ಅಧಿಕಾರಿಗಳೊಂದಿಗೆ ಸಭೆ ನಡೆಸುತ್ತೇನೆ ಎಂದರು.
ದೆಹಲಿ ಪ್ರವಾಸ ಕುರಿತು ಮಾತನಾಡಿದ ಅವರು, ರಾಷ್ಟ್ರೀಯ ಅಧ್ಯಕ್ಷರು, ಸಚಿವರನ್ನ ಭೇಟಿ ಮಾಡಿದ್ದೇನೆ. ಮೊದಲು ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ನಂತರ ರಾಜ್ಯ ಸಂಪುಟ ವಿಸ್ತರಣೆ ಬಗ್ಗೆ ಆಲೋಚಿಸೋಣ ಎಂದು ಹೈ ಕಮಾಂಡ್ ನಾಯಕರು ಹೇಳಿದ್ದಾರೆ. ಆ.10 ಮತ್ತು 11ರಂದು ಮತ್ತೆ ದೆಹಲಿಗೆ ಕೇಂದ್ರ ಸಚಿವ ಸುರೇಶ್ ಅಂಗಡಿ ಸೇರಿ ಎಲ್ಲ ಸಂಸದರು ತೆರಳುತ್ತೇವೆ ಎಂದ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
