ಬೆಂಗಳೂರು :
ಬೆಂಗಳೂರು ನಗರದ ಯಶವಂತಪುರ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆಯಾಗಿದೆ. 2018ರಲ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಜಯಗಳಿಸಿದ್ದ ಎಸ್. ಟಿ. ಸೋಮಶೇಖರ್ ಅನರ್ಹಗೊಂಡಿದ್ದಾರೆ.
ಈ ಉಪ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಜಯಗಳಿಸಲು ಕಾಂಗ್ರೆಸ್ ತಂತ್ರ ರೂಪಿಸುತ್ತಿದೆ. ಅದರಲ್ಲೂ ಎಸ್. ಟಿ. ಸೋಮಶೇಖರ್‌ಗೆ ತಕ್ಕ ಪಾಠ ಕಲಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಾಗಿದ್ದಾರೆ. ಅದಕ್ಕಾಗಿ ಜೆಡಿಎಸ್ ನಾಯಕನನ್ನು ಸೆಳೆಯಲು ಸಜ್ಜಾಗಿದ್ದಾರೆ.
ಕಳೆದ ಚುನಾವಣೆಯಲ್ಲಿ ಜೆಡಿಎಸ್‌ನಿಂದ ಕಣಕ್ಕಿಳಿದಿದ್ದ ಟಿ. ಎನ್. ಜವರಾಯಿ ಗೌಡ 104562 ಮತ ಪಡೆದಿದ್ದರು. ಕಾಂಗ್ರೆಸ್‌ನ ಎಸ್. ಟಿ. ಸೋಮಶೇಖರ್ 115273 ಮತಗಳನ್ನು ಪಡೆದು ಜಯಗಳಿಸಿದ್ದರು. ಈ ಉಪ ಚುನಾವಣೆಯಲ್ಲಿ ಯಾರಿಗೆ ಗೆಲುವು ಎಂಬುದು ಕುತೂಹಲಕ್ಕೆ ಕಾರಣವಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ