ನೆರೆ ಸಂತ್ರಸ್ತರಿಗೆ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಿಂದ ಒಂದು ಕೋಟಿ ದೇಣಿಗೆ

ಉಡುಪಿ:

   ನೆರೆಯಿಂದ ಉತ್ತರ ಕರ್ನಾಟಕ ತತ್ತರಿಸಿದೆ  ಇದಕ್ಕಾಗಿ ಹಲವು ಸಂಘ ಸಂಸ್ಥೆಗಳು, ದಾನಿಗಳು ನೆರೆ ಸಂತ್ರಸ್ತರಿಗೆ ಹಣಕಾಸಿನ ನೆರವು ನೀಡುತ್ತಿದ್ದಾರೆ.

ಹಾಗೇ ಉಡುಪಿ ಜಿಲ್ಲೆಯ ಪ್ರಸಿದ್ಧ ದೇವಸ್ಥಾನವಾಗಿರುವ ಕೊಲ್ಲೂರು ಮೂಕಾಂಬಿಕಾ ದೇಗುಲದ ಆಡಳಿತ ಮಂಡಳಿ ಕೂಡ ನೆರೆ ಸಂತ್ರಸ್ತರಿಗೆ ಹಣಕಾಸಿನ ನೆರವು ನೀಡಿದ್ದಾರೆ .ಕೊಲ್ಲೂರು ಮೂಕಾಂಬಿಕಾ ದೇಗುಲದಿಂದ ಪರಿಹಾರ ದೇಣಿಗೆಯಾಗಿ ಒಂದು ಕೋಟಿ ರೂಪಾಯಿ ನೀಡಲು ನಿರ್ಣಯ ತೆಗೆದುಕೊಳ್ಳಲಾಗಿದೆ.

 ಕೊಲ್ಲೂರು ದೇಗುಲದ ವ್ಯವಸ್ಥಾಪನಾ ಸಮಿತಿಯು ಈ ತೀರ್ಮಾನ ಮಾಡಿದೆ. ಈ ದೇಣಿಗೆಯನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

  ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ