ಎಸ್​ಟಿ ಸಮುದಾಯಕ್ಕೆ ಶೇ7.5 ಮೀಸಲಾತಿ ; ಶ್ರೀರಾಮುಲು??

ಚಿತ್ರದುರ್ಗ ;

   ಎಸ್​ಟಿ ಸಮುದಾಯಕ್ಕೆ ಶೇ 7.5 ರಷ್ಟು ಮೀಸಲಾತಿ ಕೊಡಿಸುವ ಜವಾಬ್ದಾರಿಯನ್ನು ನನಗೆ ಬಿಟ್ಟುಬಿಡಿ, ಕೊಟ್ಟ ಮಾತು ಉಳಿಸಿಕೊಳ್ಳದಿದ್ದಾರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಸಚಿವ ಶ್ರೀರಾಮುಲು ಸವಾಲು ಹಾಕಿದ್ದಾರೆ.

ಚಿತ್ರದುರ್ಗದಲ್ಲಿ  ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ,ನಮ್ಮ ಸಮಾಜಕ್ಕೆ ನ್ಯಾಯ ಸಿಗಬೇಕಿದೆ, ಹೀಗಾಗಿ ನಾವೆಲ್ಲ ಒಗ್ಗಟ್ಟಾಗಿ ಹೋರಾಟ ನಡೆಸಬೇಕಿದೆ. ಇನ್ನೂ ಸಮಾಜದ ಅಭಿವೃದ್ಧಿಗೆ ಶೇ 7.5 ರಷ್ಟು ಮೀಸಲಾತಿ ಅಗತ್ಯವಿದ್ದು, ಈ ಜವಾಬ್ದಾರಿಯನ್ನು ನನಗೆ ಬಿಟ್ಟುಬಿಡಿ. ನಾನು ಕೊಟ್ಟ ಮಾತು ಉಳಿಸಿಕೊಳ್ಳದಿದ್ದರೆ ರಾಜಕೀಯದಿಂದಲೇ ನಿವೃತ್ತಿಪಡೆಯುತ್ತೇನೆ” ಎಂದು ಸಚಿವ ಶ್ರೀರಾಮುಲು ಸವಾಲು ಹಾಕಿದ್ದಾರೆ.

    ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ