ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಮಂಡ್ಯ ಕ್ಷೇತ್ರವನ್ನು ಜೆಡಿಎಸ್ ಪಕ್ಷಕ್ಕೆ ಬಿಟ್ಟು ಕೊಡಲಾಗಿದೆ. ಸುಮಲತಾ ಕುರಿತು ರೇವಣ್ಣ ಹೇಳಿಕೆ ವಿಚಾರ ನನಗೆ ಗೊತ್ತಿಲ್ಲ. ಏನು ಹೇಳಿದ್ದಾರೆ ಅದನ್ನು ನೋಡಿ ಮಾತನಾಡುತ್ತೇನೆ ಎಂದರು.

ಕಾಂಗ್ರೆಸ್ ಹಾಗೂ ಜೆಡಿಎಸ್ ಟಿಕೆಟ್ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಶ್ನಿಸಿದಾಗ, ಸಿದ್ದರಾಮಯ್ಯ ಹಾಗೂ ದಿನೇಶ್ ಗುಂಡೂರಾವ್ ಅವರನ್ನೆ ಕೇಳಿ ಎಂದರು. ಮಹದಾಯಿ ಯೋಜನೆಗೆ ಬಜೆಟ್ನಲ್ಲಿ ಹಣ ಕಾಯ್ದಿರಿಸುವ ಅವಶ್ಯಕತೆ ಇಲ್ಲ. ನೋಟಿಫಿಕೇಶನ್ ಆದ ಮೇಲೆ ಕಾಮಗಾರಿ ಆರಂಭ ಮಾಡುತ್ತೇವೆ ಎಂದರು.
