ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ

ಬೆಂಗಳೂರು:   ಮುನವರ್ ಪಾಷಾ ಬಂಧಿತ ಆರೋಪಿಯಾಗಿದ್ದು, ಈತ ಹೆಚ್ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯ ಎಲ್ಬಿಎಸ್ ನಗರದ ಇಸ್ಲಾಂಪುರ ಬಳಿ  ಗಾಂಜಾ ಮಾರಾಟ ಮಾಡುತ್ತಿದ್ದ ಎಂದು ತಿಳಿದು ಬಂದಿದ್ದು, ನಗರದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದವನನ್ನು ಬಂಧನ ಮಾಡುವಲ್ಲಿ ಹೆಚ್ಎಎಲ್ ಪೊಲೀಸರು ಯಶಸ್ವಿಯಾಗಿದ್ದಾರೆ. 

   ವಿದ್ಯಾರ್ಥಿಗಳು, ಉದ್ಯಮಿಗಳು, ಯುವಕರನ್ನು ಟಾರ್ಗೆಟ್​ ಮಾಡಿ ಹೆಚ್ಚಿನ ಬೆಲೆಗೆ ಗಾಂಜಾ ನೀಡುತ್ತಿದ್ದನು. ಹೆಚ್ಎಎಲ್ ಪೊಲೀಸರು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದಾಗ ಆರೋಪಿಯಿಂದ ಪೊಲೀಸರು 2ಕೆಜಿ 100 ಗ್ರಾಂ ತೂಕದ ಗಾಂಜಾ ವಶಪಡಿಸಿ ಹೆಚ್ಎಎಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿ ತನಿಖೆ ನಡೆಸಿದ್ದಾರೆ.

nnad

   ಆರೋಪಿಯು ವಿಶಾಖಪಟ್ಟಣದ‌ ಸುತ್ತಮುತ್ತಲ ಅರಣ್ಯ ಪ್ರದೇಶದಲ್ಲಿ ಬೆಳೆದಿದ್ದ ಗಾಂಜಾ ಖರೀದಿಸುತ್ತಿದ್ದನು. ಆ ಪ್ರದೇಶದಲ್ಲಿ 5000 ರೂಪಾಯಿ ಕಡಿಮೆ ಬೆಲೆಗೆ ಗಾಂಜಾ ಲಭ್ಯವಿರುತ್ತಿದ್ದು, ಅಲ್ಲಿಂದ ಖರೀದಿ ಮಾಡಿ ಬೆಂಗಳೂರಿಗೆ ತಂದು 15-20 ಸಾವಿರ ಬೆಲೆಗೆ ಮಾರಾಟ ಮಾಡುತ್ತಿದ್ದ. ಇನ್ನು ಸಿಲಿಕಾನ್ ಸಿಟಿಯಲ್ಲಿ ಈತನ ಸಹೋದರ ಮುಬಾರಕ್ ಪಾಷಾ ಮಾರಟಕ್ಕೆ ಸಾಥ್ ನೀಡಿ ಇತ್ತೀಚೆಗೆಗೆ ಕೆಜಿ ಹಳ್ಳಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದನು. ಪೊಲೀಸರು ಗಾಂಜಾ ಹಾಗೂ ಅಕ್ರಮ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. 

       ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ