ಜಮ್ಮು-ಕಾಶ್ಮೀರ: ಪುಲ್ವಾಮದಲ್ಲಿ ಇಬ್ಬರು ಉಗ್ರರ ಎನ್’ಕೌಂಟರ್

ಶ್ರೀನಗರ :

  ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ಭಾರತೀಯ ಸೇನಾಪಡೆ ಎನ್’ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರು ಹಾಗೂ ಓರ್ವ ಸಹಚರನನ್ನು ಹತ್ಯೆ  ಮಾಡಿದೆ. ಇಂದು ಮುಂಜಾನೆ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ಎನ್​ಕೌಂಟರ್ ನಡೆಸಿರುವ ಭಾರತೀಯ ಸೇನಾಪಡೆ ಇಬ್ಬರು ಉಗ್ರರು ಹಾಗೂ ಓರ್ವ ಸಹಚರನನ್ನು ಗುಂಡಿಕ್ಕಿ ಕೊಂದಿದ್ದಾರೆ.

   ಪುಲ್ವಾಮಾ ಜಿಲ್ಲೆಯ ಅವಂತಿಪೋರಾದ ಗೋರಿಪೋರಾ ಎಂಬ ಪ್ರದೇಶದಲ್ಲಿ ಭಾರತೀಯ ಸೇನಾಪಡೆಯ ಯೋಧರು ಎನ್​ಕೌಂಟರ್ ನಡೆಸಿದ್ದಾರೆ. ಅಡಗಿರುವ ಮತ್ತಷ್ಟು ಉಗ್ರರಿಗಾಗಿ ಇನ್ನೂ ಹುಡುಕಾಟ ನಡೆಸಲಾಗುತ್ತಿದೆ.

  ಪುಲ್ವಾಮದ ಗೋರಿಪೋರಾದಲ್ಲಿ ಉಗ್ರರು ಅಡಗಿ ಕುಳಿತಿರುವ ಮಾಹಿತಿ ತಿಳಿಯುತ್ತಿದ್ದಂತೆ ಇಂದು ಮುಂಜಾನೆ ಸೈನಿಕರು ಕಾರ್ಯಾಚರಣೆ ಆರಂಭಿಸಿದ್ದರು. ಈ ಸಂದರ್ಭದಲ್ಲಿ ಉಗ್ರರು ಮತ್ತು ಭಾರತೀಯ ಸೇನಾಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ. ಇದರಿಂದಾಗಿ ಎನ್​ಕೌಂಟರ್​ ನಡೆಸಲು ನಿರ್ಧರಿಸಿದ ಸೇನಾಪಡೆಯ ಇಬ್ಬರು ಉಗ್ರರು ಸೇರಿದಂತೆ ಒಟ್ಟು ಮೂವರನ್ನು ಹತ್ಯೆ ಮಾಡಿದ್ದಾರೆ. ಹತ್ಯೆಯಾದವರಲ್ಲಿ ಉಗ್ರ ಸಂಘಟನೆಯ ಕಮಾಂಡರ್ ಕೂಡ ಸೇರಿದ್ದಾನೆ ಎನ್ನಲಾಗಿದೆ.

     

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap