ಮಂಡ್ಯ :
ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ಬೃಹತ್ ಸಮಾವೇಶ ನಡೆಸಿದ್ದ ಜೆಡಿಎಸ್ ವಿರುದ್ಧ 3 ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ.

ಸಮಾವೇಶದಲ್ಲಿ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡಿದ್ದಾರೆ ಎಂದು ಆರೋಪಿಸಿ ಜೆಡಿಎಸ್ ವಿರುದ್ಧ 3 ಪ್ರತ್ಯೇಕ ಎಫ್ಐಆರ್ ದಾಖಲಿಸಲಾಗಿದೆ. ಮಂಡ್ಯದ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿಕೊಳ್ಳಲಾಗಿದ್ದು, ನಿಖಿಲ್ ನಾಮಪತ್ರ ಸಲ್ಲಿಕೆ ವೇಳೆ ನೀತಿ ಸಂಹಿತೆ ಉಲ್ಲಂಘನೆ ಮಾಡಲಾಗಿದೆ ಎನ್ನಲಾಗಿದೆ. ಪ್ಲೈಯಿಂಗ್ ಸ್ಕ್ವಾಡ್ ರವಿ ಎಂಬುವವರು ನೀಡಿದ ದೂರಿನ ಆಧಾರದಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ಕಾವೇರಿ ವನದಲ್ಲಿ ಹೂ ಕುಂಡಗಳು, ಹೂವಿನ ಗಿಡಗಳು, ಪೌಂಟೇನ್, ವಿದ್ಯುತ್ ಸಂಪರ್ಕಗಳು, ಲಾನ್ ತುಳಿದು ಹಾಳು ಮಾಡಲಾಗಿದೆ ಮತ್ತು ಮಂಡ್ಯದ ಸಂಜಯ ವೃತ್ತದಲ್ಲಿ ಅನುಮತಿ ಪಡೆಯದೆ ಹಸಿರು, ಬಿಳಿ ಬಣ್ಣದ ಪೇಪರ್ ಚೂರುಗಳನ್ನು ಸಿಡಿಸಿದರಿಂದ ಮಂಡ್ಯದ ಕಾವೇರಿ ವನದ ಎದುರು ಬೆಂಗಳೂರು – ಮೈಸೂರು ಹೆದ್ದಾರಿಯಲ್ಲಿ ಮಧ್ಯಾಹ್ನ 2.30ರಿಂದ ಸಂಜೆ 4 ಗಂಟೆ ತನಕ ನಿಂತು ಸಂಚಾರಕ್ಕೆ ಅಡ್ಡಿ ಉಂಟು ಮಾಡಲಾಗಿದೆ ಎಂದು ಪ್ಲೈಯಿಂಗ್ ಸ್ಕ್ವಾಡ್ ಸುಧಾಮ ದೂರು ನೀಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








