ದೆಹಲಿ :
ಐಎನ್‌ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಸಿಬಿಐ ಕಸ್ಟಡಿಯಲ್ಲಿರುವ ಕೇಂದ್ರದ ಮಾಜಿ ವಿತ್ತ ಸಚಿವ ಪಿ ಚಿದಂಬರಂ ಅರ್ಜಿ ವಜಾಗೊಂಡಿದೆ.
ಜಾರಿ ನಿರ್ದೇಶನಾಲಯಕ್ಕೆ ಶರಣಾಗುವುದಾಗಿ ಸಿಬಿಐ ವಿಶೇಷ ಕೋರ್ಟ್ಗೆ ಚಿದಂಬರಮ್ ಮಾಡಿಕೊಂಡ ಮನವಿಯನ್ನು ಸಿಬಿಐ ವಿಶೇಷ ಕೋರ್ಟ್ ತಿರಸ್ಕರಿಸಿದ್ದು, “ಐಎನ್‌ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಚಿದಂಬರಂಗೆ ಸೆಪ್ಟೆಂಬರ್ 19ರ ತನಕ ಜೈಲುವಾಸ ಅನುಭವಿಸಬೇಕಿದೆ” ಎಂದು ವಿಶೇಷ ಜಡ್ಜ್ ಅಜಯ್ ಕುಮಾರ್ ಕುಹರ್ ತಮ್ಮ ಆದೇಶದಲ್ಲಿ ಹೇಳಿದ್ದಾರೆ.
ಐಎನ್‌ಎಕ್ಸ್ ಪ್ರಕರಣದಲ್ಲಿ ಇನ್ನೂ ಸಾಕಷ್ಟು ವಿಚಾರಗಳನ್ನು ಕಲೆಹಾಕಬೇಕಿದೆ. ಈಗಲೇ ಅವರನ್ನು ವಿಚಾರಣೆ ನಡೆಸುವ ಅಗತ್ಯವಿಲ್ಲ. ಅವರನ್ನು ನ್ಯಾಯಾಂಗ ಬಂಧನದಲ್ಲಿ ಮುಂದುವರಿಸುವುದರಿಂದ ಯಾವುದೇ ಸಾಕ್ಷ್ಯನಾಶದ ಭಯ ಇರುವುದಿಲ್ಲ. ತಮಗೆ ಬೇಕನಿಸಿದಾಗ ಅವರನ್ನ ಕಸ್ಟಡಿಗೆ ತೆಗೆದುಕೊಳ್ಳಲು ಕೋರ್ಟ್ನಲ್ಲಿ ಮನವಿ ಮಾಡಿಕೊಳ್ಳುತ್ತೇವೆ ಎಂದು ಜಾರಿ ನಿರ್ದೇಶನಾಲಯವು ವಾದಿಸಿತ್ತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ