ಭಾರತೀಯ ವಾಯುಗಡಿ ಪ್ರವೇಶಿಸಿದ್ದ ಪಾಕಿಸ್ತಾನದ ಎಫ್16 ಯುದ್ಧವಿಮಾನಗಳನ್ನು ರಷ್ಯಾ ನಿರ್ಮಿತ ಮಿಗ್-21 ಬೈಸನ್ ಜೆಟ್ ಯುದ್ಧವಿಮಾನದಲ್ಲಿ ಬೆನ್ನಟ್ಟಿ ಹೋಗಿದ್ದ ಅಭಿನಂದನ್, ಒಂದು ವಿಮಾನವನ್ನು ಹೊಡೆದುರುಳಿಸಿದ್ದರು. ತಮ್ಮ ವಿಮಾನದ ಮೇಲೆ ದಾಳಿ ನಡೆದು, ಅದು ಹಾನಿಗೊಂಡಿದ್ದನ್ನು ಗಮನಿಸಿದ್ದ ಅವರು ವಿಮಾನದಿಂದ ಜಿಗಿದಿದ್ದರು. ಪ್ಯಾರಾಚೂಟ್ ಸಹಾಯದಿಂದ ಕೆಳಗೆ ಹಾರಿ ಅಭಿನಂದನ್ ಪ್ರಾಣಾಪಾಯದಿಂದ ಪಾರಾಗಿದ್ದರು. ಆದರೆ ಅವರು ಪಾಕ್ ಆಕ್ರಮಿತ ಕಾಶ್ಮೀರ ಪ್ರದೇಶದಲ್ಲಿ ಬಿದ್ದಿದ್ದರಿಂದ ಸ್ಥಳೀಯರಿಂದ ಹಲ್ಲೆಗೆ ಒಳಗಾಗಿ ಪಾಕಿಸ್ತಾನ ಸೇನೆಯ ಬಂಧನಕ್ಕೆ ಒಳಗಾಗಿದ್ದರು.
ಭಾರತ ಸರ್ಕಾರ ಸರ್ಕಾರವು ಅಭಿನಂದನ್ ಬಿಡುಗಡೆಗೆ ಪಾಕ್ ಸರ್ಕಾರದ ಮೇಲೆ ಭಾರೀ ಒತ್ತಡ ಹಾಕಿತ್ತು. ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಒತ್ತಡ ಹೆಚ್ಚಿದ್ದರಿಂದ ಜಿನೀವಾ ಒಪ್ಪಂದದ ಪ್ರಕಾರ ಅಭಿನಂದನ್ ಅವರನ್ನು ಬಿಡುಗಡೆ ಮಾಡುವ ಅನಿವಾರ್ಯತೆಗೆ ಸಿಲುಕಿದ್ದ ಪಾಕಿಸ್ತಾನ ಅಭಿನಂದನ್ ಅವರನ್ನು ಬಿಡುಗಡೆ ಮಾಡಲು ನಿರ್ಧರಿಸಿತ್ತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ