ಹಿಂದೂಗಳಿಗೆ ದೀಪಾವಳಿ ಶುಭಾಶಯ ಕೋರಿದ ಪಾಕ್ ಪ್ರಧಾನಿ!!

ಇಸ್ಲಾಮಾಬಾದ್: 

      ದೀಪಗಳ ಹಬ್ಬ ದೀಪಾವಳಿಯ ಅಂಗವಾಗಿ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಹಿಂದೂ ಸಮುದಾಯದವರಿಗೆ ಶುಭಾಶಯ ಕೋರಿದ್ದಾರೆ.

      ಟ್ವಿಟರ್‌ ಮೂಲಕ ಇಮ್ರಾನ್‌ ಖಾನ್‌ ಶುಭ ಕೋರಿದ್ದಾರೆ. ‘ದೇಶದ ಹಿಂದೂಗಳಿಗೆಲ್ಲ ದೀಪಾವಳಿಯ ಶುಭಾಶಯಗಳು’ ಎಂದು ಅವರು ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ.

      ಪಾಕಿಸ್ತಾನದ ಹಿಂದೂಗಳು ದೇಶಾದ್ಯಂತ ದೀಪಾವಳಿಯನ್ನು ಉತ್ಸಾಹ ಮತ್ತು ಸಂಭ್ರಮದಿಂದ ಆಚರಿಸುತ್ತಿದ್ದಾರೆ. ಹಿಂದೂ ಕುಟುಂಬಸ್ಥರು ತಮ್ಮ ಮನೆ ಮತ್ತು ದೇವಾಲಯಗಳನ್ನು ವರ್ಣರಂಜಿತ ದೀಪಗಳಿಂದ ಅಲಂಕರಿಸಿದ್ದಾರೆ. ದೇವಾಲಯಗಳಲ್ಲಿ ವಿಶೇಷ ಪೂಜೆಗಳು ನಡೆಯಲಿದ್ದು, ಸಿಹಿ ತಿಂಡಿಗಳನ್ನು ಜನರು ವಿತರಿಸುತ್ತಿದ್ದಾರೆ ಎಂದು ಜಿಯೋ ನ್ಯೂಸ್ ವರದಿ ಮಾಡಿದೆ.

     ಕದನ ವಿರಾಮ ಉಲ್ಲಂಘನೆ ಮಾಡಿ ಭಾರತದ ಗಡಿ ಪ್ರದೇಶದಲ್ಲಿ ಗುಂಡಿನ ದಾಳಿ ಮಾಡುತ್ತ ಒಂದೆಡೆ ಪಾಕಿಸ್ತಾನದ ಸೈನಿಕರು ಭಾರತದ ಮೇಲೆ ದಾಳಿ ನಡೆಸುತ್ತಿದ್ದರೆ, ಇನ್ನೊಂದೆಡೆ, ಪಾಕಿಸ್ತಾನದ ಅಲ್ಪಸಂಖ್ಯಾತ ಹಿಂದೂ ಸಮುದಾಯಕ್ಕೆ ಪ್ರಧಾನಿ ಇಮ್ರಾನ್ ಖಾನ್ ಅವರು ಶನಿವಾರ ದೀಪಾವಳಿಯ ಶುಭಾಶಯ ಕೋರಿರುವುದು ಗಮನ ಸೆಳೆದಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

 

Recent Articles

spot_img

Related Stories

Share via
Copy link