ನ್ಯೂಯಾರ್ಕ್:
ಪಾಕಿಸ್ತಾನದ ಸೇನೆ ಹಾಗೂ ಗುಪ್ತಚರ ಸಂಸ್ಥೆ ಭಯೋತ್ಪಾದಕ ಸಂಸ್ಥೆಗಳೊಂದಿಗೆ ಸಂಪರ್ಕ ಹೊಂದಿದ್ದನ್ನು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಒಪ್ಪಿಕೊಂಡಿದ್ದಾರೆ.
ನ್ಯೂಯಾರ್ಕ್ನ ವಿದೇಶಾಂಗ ವ್ಯವಹಾರಗಳ ಕೇಂದ್ರದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಈ ಸತ್ಯ ಬಿಚ್ಚಿಟ್ಟಿದ್ದಾರೆ.
ಅಮೆರಿಕದ 9/11 ದಾಳಿ ಕುಖ್ಯಾತಿಯ ಅಲ್ ಕೈದಾ ಉಗ್ರ ಸಂಘಟನೆ ಸೇರಿದಂತೆ ಇತರೆ ಉಗ್ರಗಾಮಿ ಗುಂಪುಗಳಿಗೆ ಪಾಕಿಸ್ತಾನ ಸೇನೆ ಮತ್ತು ಇಂಟರ್ ಸರ್ವೀಸ್ ಇಂಟಲಿಜೆನ್ಸ್ (ಐಎಸ್ಐ) ನಿಂದಲೇ ತರಬೇತಿ ನೀಡಲಾಗುತ್ತಿದೆ ಎಂದಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ