ದೆಹಲಿ :
ಮುಂಬರುವ ಲೋಕಸಭಾ ಚುನಾವಣೆಗೆ ಬಿಜೆಪಿಯು ‘ಸಂಕಲ್ಪ ಪತ್ರ’ ಎಂಬ ಹೆಸರಿನಲ್ಲಿ ತನ್ನ ಚುನಾವಣಾ ಪ್ರಣಾಳಿಕೆಯನ್ನು ಸೋಮವಾರ ಬಿಡುಗಡೆ ಮಾಡಿದೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಉಪಸ್ಥಿತಿಯಲ್ಲಿ 48 ಪುಟಗಳ ಪ್ರಣಾಳಿಕೆಯನ್ನು ಕೇಂದ್ರ ಸಚಿವ ರಾಜ್ ನಾಥ್ ಸಿಂಗ್ ಅವರು ಬಿಡುಗಡೆಗೊಳಿಸಿದರು.
ಒಟ್ಟು 45 ಪುಟಗಳ ಪ್ರಣಾಳಿಕೆಯಲ್ಲಿ ರಾಷ್ಟ್ರೀಯತೆ, ರಾಷ್ಟ್ರೀಯ ಭದ್ರತೆ, ಭಯೋತ್ಪಾದನೆ ನಿರ್ಮೂಲನೆ ಜೊತೆಗೆ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಒತ್ತು ನೀಡಿದ್ದು, ಭಾರತದ ಕೀರ್ತಿ ಪತಾಕೆಯನ್ನು ವಿಶ್ವ ಮಟ್ಟಕ್ಕೆ ಕೊಂಡೊಯ್ಯುವುದು, ಆರ್ಥಿಕ ಸದೃಢತೆ ಸೇರಿದಂತೆ ಹತ್ತು ಹಲವು ಭರವಸೆಗಳನ್ನು ಈ ಪ್ರಣಾಳಿಕೆ ಒಳಗೊಂಡಿದೆ ಎನ್ನಲಾಗಿದೆ.
ನವದೆಹಲಿಯ ಪಕ್ಷದ ಕೇಂದ್ರ ಕಚೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ, ಕೇಂದ್ರ ಸಚಿವರಾದ ಅರುಣ್ ಜೇಟ್ಲಿ , ಸುಷ್ಮಾ ಸ್ವರಾಜ್, ರಾಜನಾಥ್ ಸಿಂಗ್ ಸೇರಿದಂತೆ ಪಕ್ಷದ ಮುಖಂಡರ ಸಮ್ಮುಖದಲ್ಲಿ ಇಂದು ಪ್ರಣಾಳಿಕೆಯನ್ನು ಅನಾವರಣಗೊಳಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
