ನವದೆಹಲಿ: 
ಮಹಾರಾಷ್ಟ್ರದ ಗಡ್‌ಚಿರೋಲಿಯಲ್ಲಿ ಬುಧವಾರ ನಕ್ಸಲರು ನಡೆಸಿದ ಐಇಡಿ ಸ್ಫೋಟಿಸಿ 16 ಯೋಧರನ್ನು ಹುತಾತ್ಮರಾಗಿಸಿದ ದಾಳಿಕೋರರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಆಗ್ರಹಿಸಿದ್ದಾರೆ.
Strongly condemn the despicable attack on our security personnel in Gadchiroli, Maharashtra. I salute all the brave personnel. Their sacrifices will never be forgotten. My thoughts & solidarity are with the bereaved families. The perpetrators of such violence will not be spared.
— Chowkidar Narendra Modi (@narendramodi) May 1, 2019
ಗಡ್‌ಚಿರೋಲಿಯಲ್ಲಿ ಭದ್ರತಾ ಸಿಬ್ಬಂದಿ ಮೇಲೆ ನಡೆದ ಭೀಕರ ದಾಳಿಯನ್ನು ತೀವ್ರವಾಗಿ ಖಂಡಿಸುತ್ತೇನೆ. ಹುತಾತ್ಮರಾದ ಎಲ್ಲಾ ವೀರಯೋಧರಿಗೆ ಶಾಂತಿ ದೊರೆಯಲಿ. ಅವರ ಬಲಿದಾನ ಎಂದಿಗೂ ಮರೆಯಲು ಸಾಧ್ಯವಿಲ್ಲ. ಈ ದುಷ್ಕೃತ್ಯ ಹಿಂದಿರುವವರನ್ನು ಸುಮ್ಮನೆ ಬಿಡಲು ಸಾಧ್ಯವಿಲ್ಲ ಎಂದು ಪ್ರಧಾನಿ ಮೋದಿ ಕಟು ಶಬ್ದಗಳಲ್ಲಿ ಖಂಡಿಸಿ, ಟ್ವೀಟ್ ಮಾಡಿದ್ದಾರೆ.
ನಕ್ಸಲರ ದುಷ್ಕೃತ್ಯದಿಂದ 16 ಸಿಆರ್ಪಿಎಫ್ ಯೋಧರು ಘಟನೆಯಲ್ಲಿ ಹುತಾತ್ಮರಾಗಿದ್ದು, ಪ್ರಧಾನಿ ಮೋದಿಯಲ್ಲದೇ, ಗೃಹ ಸಚಿವ ರಾಜನಾಥ್ ಸಿಂಗ್ ಹಾಗೂ ಅಮಿತ್ ಶಾ ಸಹಾ ಕಟು ಶಬ್ದಗಳಲ್ಲಿಯೇ ಖಂಡಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








