ನವದೆಹಲಿ:
ಈ ಬಾರಿ ಕೂಡ ವಾರಣಾಸಿ ಕ್ಷೇತ್ರದಿಂದಲೇ ಪ್ರಧಾನಿ ಮೋದಿ ಮತ್ತೊಮ್ಮೆ ಲೋಕಸಭಾ ಚುನಾವಣೆಗೆ ಸ್ಪರ್ಧೆ ಬಯಸಿದ್ದು , ನಾನು ಲಕ್ನೋ ಕ್ಷೇತ್ರದಿಂದ ಕಣಕ್ಕೆ ಇಳಿಯಲಿದ್ದೇನೆ ಎಂದು ಗೃಹ ಸಚಿವ ರಾಜನಾಥ್ ಸಿಂಗ್ ಸ್ಪಷ್ಟಪಡಿಸಿದ್ದಾರೆ.
ಇಂದು(ಶನಿವಾರ) ಸಂಜೆ ಲೋಕಸಭಾ ಚುನಾವಣೆಗೆ ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆಯಾಗಲಿದ್ದು, ಈ ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಜನಾಥ್ ಸಿಂಗ್ ಅವರ ಹೆಸರೂ ಬಿಡುಗಡೆಯಾಗುವ ಸಾಧ್ಯತೆ ಇದೆ.
ಸುಮಾರು 100 ಅಭ್ಯರ್ಥಿಗಳ ಪಟ್ಟಿಯನ್ನು ಇಂದು ಬಿಡುಗಡೆ ಮಾಡಲಾಗುತ್ತಿದ್ದು, ಈ ಪಟ್ಟಿಯಲ್ಲಿ ಉತ್ತರ ಪ್ರದೇಶದ 20 ಅಭ್ಯರ್ಥಿಗಳ ಹೆಸರು ಬಿಡುಗಡೆಯಾಗಲಿದೆ.
ಲೋಕಸಭಾ ಚುನಾವಣೆ ಕಣದಲ್ಲಿ ಈ ಬಾರಿ ಪ್ರಧಾನಿ ನರೇಂದ್ರ ಮೋದಿ ಅವರು ಕ್ಷೇತ್ರ ಬದಲಾವಣೆ ಬಯಸಿದ್ದಾರೆ. ಅವರು ವಾರಣಾಸಿ ಬಿಟ್ಟು ಬೇರೆ ಕ್ಷೇತ್ರದತ್ತ ಮುಖ ಮಾಡಲಿದ್ದಾರೆ ಎಂಬ ಅನೇಕ ಊಹಾಪೋಹಾಗಳು ಹರಿದಾಡುತ್ತಿದ್ದವು. ಈ ಗಾಳಿ ಸುದ್ದಿಗೆ ರಾಜನಾಥ್ ಸಿಂಗ್ ತೆರೆ ಎಳೆದಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ