ನವದೆಹಲಿ:
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಇಂದು 49ನೇ ಜನ್ಮದಿನದ ಸಂಭ್ರಮ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ರಾಹುಲ್‍ಗೆ ಹುಟ್ಟುಹಬ್ಬದ ಶುಭ ಕೋರಿದ್ದಾರೆ.
ರಾಹುಲ್ ಗಾಂಧಿಯವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಅವರಿಗೆ ದೇವರು ದೀರ್ಘಾಯಸ್ಸು, ಆರೋಗ್ಯ ನೀಡಲಿ ಎಂದು ಹಾರೈಸಿ ಟ್ವೀಟ್ ಮಾಡಿದ್ದಾರೆ.
Best wishes to Shri @RahulGandhi on his birthday. May he be blessed with good health and a long life.
— Narendra Modi (@narendramodi) June 19, 2019
ಇನ್ನು ಯುಪಿಎ ಅಧ್ಯಕ್ಷೆ ಮತ್ತು ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕಿ ಸೋನಿಯಾಗಾಂಧಿ, ಸಹೋದರಿ-ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್, ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಶೀಲಾ ದೀಕ್ಷಿತ್ ಸೇರಿದಂತೆ ಅನೇಕ ಗಣ್ಯರು ರಾಹುಲ್‍ಗೆ ಜನ್ಮದಿನದ ಶುಭ ಕೋರಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ