ಮೋದಿಗೆ UAE ದೇಶದ ಅತ್ಯುನ್ನತ ನಾಗರಿಕ ಪುರಸ್ಕಾರ!!

ಅಬುಧಾಬಿ:

      ಪ್ರಧಾನಿ ನರೇಂದ್ರ ಮೋದಿ ಅವರು ಯುನೈಟೆಡ್ ಅರಬ್ ಎಮಿರೇಟ್ಸ್(UAE) ನ ಅತ್ಯುನ್ನತ ನಾಗರಿಕ ಗೌರವವನ್ನು ಮುಡಿಗೇರಿಸಿಕೊಳ್ಳಲಿದ್ದಾರೆ.

      ಯುಎಇ ಅಧ್ಯಕ್ಷ ಖಾಲಿಫಾ ಬಿನ್ ಜಾಯೇದ್ ಬಿನ್ ಸುಲ್ತಾನ್ ಅಲ್ ನಹ್ಯಾನ್ ಅವರು ಪ್ರಧಾನಿ ಮೋದಿ ಅವರಿಗೆ ಅತ್ಯುನ್ನತ ನಾಗರಿಕ ಗೌರವವಾದ ‘ಝಾಯದ್ ಮೆಡಲ್’ ಅನ್ನು ಘೋಷಿಸಿದರು.

     ಈ ಅತ್ಯುನ್ನತ ಪುರಸ್ಕಾರವನ್ನು ವಿಶೇಷವಾಗಿ ರಾಜರು, ಅಧ್ಯಕ್ಷರು ಹಾಗೂ ರಾಜ್ಯದ ಮುಖ್ಯಸ್ಥರಿಗೆ ಪ್ರದಾನ ಮಾಡಲಾಗುತ್ತದೆ. ಇಂತಹ ಅತ್ಯುನ್ನತ ನಾಗರಿಕ ಪ್ರಶಸ್ತಿಗೆ ಮೋದಿ ಭಾಜನರಾಗಿರುವುದು ವಿಶೇಷ. 

     ಈ ಕುರಿತು “ನಾವು ಭಾರತದೊಂದಿಗೆ ಐತಿಹಾಸಿಕ ಮತ್ತು ಸಮಗ್ರವಾದ ಕಾರ್ಯತಂತ್ರದ ಸಂಬಂಧಗಳನ್ನು ಹೊಂದಿದ್ದೇವೆ. ನಮ್ಮ ಆತ್ಮೀಯ ಗೆಳೆಯರಾದ ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮ ನಡುವಿನ ಸಂಬಂಧಗಳನ್ನು ವೃದ್ಧಿಸುವಲ್ಲಿ ಗಮನಾರ್ಹ ಪಾತ್ರ ವಹಿಸಿದ್ದಾರೆ. ಅವರ ಈ ಪ್ರಯತ್ನಕ್ಕಾಗಿ ಯುಎಇ ಅಧ್ಯಕ್ಷರು ಝಾಯೆದ್ ಮೆಡಲ್ ನೀಡಿ ಗೌರವಿಸುತ್ತಿದ್ದಾರೆ” ಎಂದು ಯುಎಇ ಅಧ್ಯಕ್ಷ ಶೇಖ್‌ ಖಲೀಫಾ ಬಿನ್‌ ಜಾಯೆದ್‌ ಅಲ್‌ ನಹ್ಯಾನ್‌ ಟ್ವೀಟ್ ಮಾಡಿದ್ದಾರೆ.

      “ಭಾರತ ಭಾರತದೊಂದಿಗೆ ಐತಿಹಾಸಿಕ ಮತ್ತು ಸಮಗ್ರ ಕಾರ್ಯತಂತ್ರ ಹೊಂದಿದ್ದೇವೆ. ಇದಕ್ಕೆಲ್ಲ ಕಾರಣ ನನ್ನ ಆತ್ಮೀಯ ಸ್ನೇಹಿತರಾದ ಪ್ರಧಾನಿ ನರೇಂದ್ರ ಮೋದಿ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

Recent Articles

spot_img

Related Stories

Share via
Copy link
Powered by Social Snap