ಪ್ರಧಾನಿಯ ‘ಮೋದಿನಾಮಿಕ್ಸ್’ ಗೆ ‘ಸಿಯೋಲ್ ಶಾಂತಿ ಪ್ರಶಸ್ತಿಯ’ ಗೌರವ

ನವದೆಹಲಿ:  

      ಪ್ರಧಾನಿ ನರೇಂದ್ರ ಮೋದಿ 2018 ನೇ ಸಾಲಿನ ಪ್ರತಿಷ್ಠಿತ ಸಿಯೋಲ್​ ಶಾಂತಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. 

      ಭಾರತದ ಆರ್ಥಿಕತೆ ಬಲವರ್ಧನೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಕೊಡುಗೆಯನ್ನು ಗುರುತಿಸಿ ಪ್ರಶಸ್ತಿಗೆ ಮೋದಿ ಅವರನ್ನು ಆಯ್ಕೆ ಮಾಡಲಾಗಿದೆ.

       ಪ್ರಧಾನಿ ನರೇಂದ್ರ ಮೋದಿ ಅವರ ಆರ್ಥಿಕತೆ ಮೋದಿನಾಮಿಕ್ಸ್ ಎಂದೇ ಪ್ರಸಿದ್ಧಿ ಪಡೆದಿದ್ದು, ” ವಿಶ್ವದ ಶಾಂತಿ, ಮಾನವ ಸಂಪನ್ಮೂಲ ಅಭಿವೃದ್ಧಿ ಹಾಗೂ ಪ್ರಜಾಪ್ರಭುತ್ವವನ್ನು ಬಲಿಷ್ಠಗೊಳಿಸುವುದಕ್ಕೆ ನರೇಂದ್ರ ಮೋದಿ ಅವರ ಕೊಡುಗೆಗಳನ್ನು ಗುರುತಿಸಿ ಸಿಯೋಲ್ ಶಾಂತಿ ಪ್ರಶಸ್ತಿಯನ್ನು ನೀಡಲಾಗಿದೆ ಎಂದು ಪ್ರಶಸ್ತಿ ಪತ್ರದಲ್ಲಿ ಉಲ್ಲೇಖಿಸಿದ್ದು ನೋಟು ಅಮಾನ್ಯೀಕರಣ, ಸರ್ಜಿಕಲ್ ಸ್ಟ್ರೈಕ್, ದೃಢ ಸ್ವಚ್ಛ ಆಡಳಿತ ಸೇರಿದಂತೆ ಮೋದಿ  ಸರ್ಕಾರದ ಅಭೂತಪೂರ್ವ ನಿರ್ಧಾರಗಳನ್ನು ಆಯ್ಕೆ ಸಮಿತಿ ಶ್ಲಾಘಿಸಿದೆ.  ಸಿಯೋಲ್ ಶಾಂತಿ ಪ್ರಶಸ್ತಿ ಸಾಂಸ್ಕೃತಿಕ ಪ್ರತಿಷ್ಠಾನ (ಸಿಯೋಲ್ ಪೀಸ್‌ ಪ್ರೈಜ್‌ ಕಲ್ಚರಲ್ ಫೌಂಡೇಶನ್‌) ಅಧ್ಯಕ್ಷ ಕ್ವೋನ್ ಇ-ಹ್ಯೋಕ್ ಈ ಸಂಬಂಧ ಅಧಿಕೃತ ಪ್ರಕಟಣೆ ನೀಡಿದ್ದಾ

      ರಿಪಬ್ಲಿಕ್‌ ಕೊರಿಯಾ ಜೊತೆಗಿನ ಭಾರತದ ಸಂಬಂಧವನ್ನು ಇನ್ನಷ್ಟು ಗಟ್ಟಿಗೊಳಿಸುವ ಉದ್ದೇಶದಿಂದ ಪ್ರಶಸ್ತಿ ಸ್ವೀಕರಿಸಲು ಮೋದಿ ಅವರು ಒಪ್ಪಿಕೊಂಡಿದ್ದಾರೆ ಮತ್ತು ತಮ್ಮನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಿರುವುದಕ್ಕೆ ಮೋದಿ ಅವರು ಕೃತಜ್ಞತೆ ಅರ್ಪಿಸಿದ್ದಾರೆ ಎಂದು ವಿದೇಶಾಂಗ ಇಲಾಖೆ ತಿಳಿಸಿದೆ.

      ಕೋರಿಯಾ ಜನರ ಶಾಂತಿ ಬಯಕೆಯ ಧ್ಯೋತಕವಾಗಿ 1990ರಲ್ಲಿ ಸ್ಥಾಪಿಸಲಾದ ಸೋಲ್‌ ಶಾಂತಿ ಪ್ರಶಸ್ತಿ ಸ್ಥಾಪಿಸಲಾಗಿದೆ. ಮೋದಿ ಈ ಪ್ರಶಸ್ತಿಯನ್ನು ಸ್ವೀಕರಿಸುತ್ತಿರುವ 14ನೇ ವ್ಯಕ್ತಿಯಾಗಿದ್ದಾರೆ. ಇದು ಭಾರತೀಯರಿಗೆ ಸಂದ ಗೌರವ.

     ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ