ಇಸ್ಲಾಮಾಬಾದ್ ;
2019ರ ಲೋಕಸಭಾ ಚುನಾವಣೆಯಲ್ಲಿ ಮೋದಿ ಮತ್ತೊಮ್ಮೆ ಪ್ರಧಾನಿಯಾದರೆ ಶಾಂತಿ ಮಾತುಕತೆಯ ಒಳ್ಳೆಯ ಅವಕಾಶಗಳಿರಬಹುದು ಎಂದು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ.
ವಿದೇಶೀ ಪತ್ರಕರ್ತರೊಂದಿಗೆ ಮತನಾಡಿದ ಪಾಕ್ ಪ್ರಧಾನಿ ಇಮ್ರಾನ್ ಖಾನ್, ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಲೋಕಸಭಾ ಚುನಾವಣೆಯಲ್ಲಿ ಗೆದ್ದು ಮತ್ತೊಮ್ಮೆ ಸರ್ಕಾರ ರಚಿಸಿದರೆ ಭಾರತದೊಂದಿಗೆ ಶಾಂತಿ ಮಾತುಕತೆ ನಡೆಸಲು ಉತ್ತಮ ಅವಕಾಶ ಸಿಗಬಹುದು. ಒಂದು ವೇಳೆ ಕಾಂಗ್ರೆಸ್ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದಲ್ಲಿ ಬಲಪಂಥೀಯ ಗುಂಪುಗಳ ಆಕ್ರೋಶಕ್ಕೆ ಹೆದರಿ ಅದು ಕಾಶ್ಮೀರ ವಿಷಯಕ್ಕೆ ಸಂಬಂಧಿಸಿ ಪಾಕ್ ಜೊತೆಗೆ ಮಾತುಕತೆ ನಡೆಸಿ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗದೇ ಇರಬಹುದು ಎಂದವರು ಹೇಳಿದ್ದಾರೆ.
ಈ ಮೂಲಕ ಗುರುವಾರದಿಂದ ಆರಂಭವಾಗುವ ಲೋಕಸಭಾ ಚುನಾವಣೆಗಳಲ್ಲಿ ಬಿಜೆಪಿ ಗೆದ್ದು ಮೋದಿ ಸರ್ಕಾರ ಅಧಿಕಾರಕ್ಕೆ ಬಂದರೆ ಪಾಕಿಸ್ತಾನಕ್ಕೆ ಒಳ್ಳೆಯದೆಂದು ಇಮ್ರಾನ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ