ಪ್ರಧಾನಿಗೆ ‘ಚಾಂಪಿಯನ್ಸ್ ಆಫ್ ದಿ ಅರ್ಥ್ ಅವಾರ್ಡ್’ ಪ್ರದಾನ

ದೆಹಲಿ:

      ಪರಿಸರ ಸಂರಕ್ಷಣೆಗೆ ಸಂಬಂಧಿಸಿದಂತೆ ವಿಶ್ವಸಂಸ್ಥೆ ನೀಡುವ ಅತ್ಯುನ್ನತ ಗೌರವ ಪುರಸ್ಕಾರ ‘ಚಾಂಪಿಯನ್ಸ್‌ ಆಫ್‌ ದಿ ಅರ್ಥ್‌ ಅವಾರ್ಡ್’ನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪ್ರವಾಸಿ ಭಾರತೀಯ ಕೇಂದ್ರದಲ್ಲಿ ಇಂದು ಪ್ರದಾನ ಮಾಡಲಾಯಿತು.

      ಪ್ರಧಾನಿ ಮೋದಿ ಅವರನ್ನು ಅಂತಾರಾಷ್ಟ್ರೀಯ ಸೌರ ಒಕ್ಕೂಟದಲ್ಲೇ ಮಾಡಿರುವ ವಿನೂತನ ಕೆಲಸಕ್ಕಾಗಿ ಮತ್ತು 2022ರ ಹೊತ್ತಿಗೆ ಭಾರತವನ್ನು ಸಂಪೂರ್ಣ ಪ್ಲಾಸ್ಟಿಕ್‌ ಮುಕ್ತವನ್ನಾಗಿ ಮಾಡಲು ಪ್ರತಿಜ್ಞೆ ಕೈಗೊಂಡಿರುವುದಕ್ಕಾಗಿ ಅತ್ಯುನ್ನತ ಪರಿಸರ ಗೌರವಕ್ಕೆ ಆಯ್ಕೆ ಮಾಡಲಾಗಿದೆ ಎಂದು ವಿಶ್ವಸಂಸ್ಥೆಯು ತಿಳಿಸಿದೆ.

     ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟರ್ರೆಸ್ ಅವರು ಮೋದಿಯವರ ಅನುಕರಣೀಯ ನಾಯಕತ್ವ, ಸುಸ್ಥಿರ ಅಭಿವೃದ್ಧಿಗಾಗಿ ಕೈಗೊಂಡ ಕ್ರಮ ಮತ್ತು ಹವಾಮಾನ ಬದಲಾವಣೆ ಕುರಿತ ಸಕಾರಾತ್ಮಕ ಕ್ರಮಗಳಿಗಾಗಿ ಪ್ರಶಸ್ತಿಯನ್ನು ಪ್ರದಾನ ಮಾಡಿದರು.

      ನಂತರ ಮಾತನಾಡಿದ ಪ್ರಧಾನ ಕಾರ್ಯದರ್ಶಿ ಗುಟರ್ರೆಸ್‌, ಹಮಾಮಾನದ ವೈಪರೀತ್ಯವು ಹೇಗೆ ನಮ್ಮ ಮೇಲೆ ನೇರ ಪರಿಣಾಮವನ್ನುಂಟು ಮಾಡುತ್ತದೆ ಎನ್ನುವುದನ್ನು ಮೋದಿ ಅವರು ಅರಿತಿದ್ದಾರೆ. ಅದರಿಂದುಂಟಾಗುವ ದುರಂತವನ್ನು ತಪ್ಪಿಸಲು ನಾವು ಏನು ಮಾಡಬೇಕು ಎನ್ನುವುದು ಅವರಿಗೆ ತಿಳಿದಿದೆ. ಇತರೆ ನಾಯಕರು ಕೂಡ ಇದನ್ನು ಗುರುತಿಸುತ್ತಾರೆ, ಅರ್ಥ ಮಾಡಿಕೊಳ್ಳುತ್ತಾರೆ. ಆದರೆ, ಅವರೆಲ್ಲ ಕಾರ್ಯಗತಗೊಳಿಸುವುದಿಲ್ಲ ಎಂದು ತಿಳಿಸಿದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap