​ಜಾರ್ಖಂಡ್ : ಇಂದು ನಾಲ್ಕನೇ ಹಂತದ ಮತದಾನ!

ರಾಂಚಿ:

      ಜಾರ್ಖಂಡ್ ವಿಧಾನಸಭೆಯ 15 ಕ್ಷೇತ್ರಗಳಿಗೆ ನಾಲ್ಕನೇ ಹಂತದ ಮತದಾನ ಸೋಮವಾರ ಬೆಳಗ್ಗೆ 7 ಗಂಟೆಗೆ ಆರಂಭಗೊಂಡಿದೆ.

      ಐದು ಹಂತಗಳ ಮತದಾನದಲ್ಲಿ ರಾಜ್ಯ ವಿಧಾನಸಭೆಯ 15 ಸ್ಥಾನಗಳಿಗೆ ಇಂದು ಮತದಾನ ನಡೆಯುತ್ತಿದ್ದು, ಇಬ್ಬರು ಸಚಿವರು ಹಾಗೂ 12 ಮಂದಿ ಹಾಲಿ ಶಾಸಕರು ಅದೃಷ್ಟ ಪರೀಕ್ಷೆಗೆ ಕಣದಲ್ಲಿದ್ದಾರೆ.

      ಒಟ್ಟು 81 ಕ್ಷೇತ್ರಗಳಲ್ಲಿ ಇಂದು 15 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದ್ದು, 15 ಕ್ಷೇತ್ರಗಳಲ್ಲಿ 22 ಮಹಿಳಾ ಅಭ್ಯರ್ಥಿಗಳು, ಓರ್ವ ತೃತೀಯ ಲಿಂಗಿ ಸೇರಿ ಒಟ್ಟು 221 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

     15 ಸ್ಥಾನಗಳ ಪೈಕಿ ಐದು ಸ್ಥಾನಗಳು ನಕ್ಸಲ್‌ ಪೀಡಿತ ಪ್ರದೇಶದಲ್ಲಿವೆ. ಮತದಾನ ಶಾಂತಿಯುತವಾಗಿ ನಡೆಯಲು ಚುನಾವಣಾ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದೆ. ಒಟ್ಟು 6101 ಮತಗಟ್ಟೆಗಳ ಪೈಕಿ 587 ಮತಗಟ್ಟೆಗಳು ಅತಿಸೂಕ್ಷ್ಮ ಮತಗಟ್ಟೆಗಳು ಹಾಗೂ 405 ಸೂಕ್ಷ್ಮ ಮತಗಟ್ಟೆಗಳು ಎಂದು ಮುಖ್ಯ ಚುನಾವಣಾ ಅಧಿಕಾರಿ ವಿನಯ್ ಕುಮಾರ್ ಚೌಬೆ ಹೇಳಿದ್ದಾರೆ.

      ಜಾರ್ಖಂಡ್ ನ ಜಮುವಾ, ಬಗೊದರ್, ಗಿರಿದಿಹ್, ದುಮ್ರಿ ಮತ್ತು ತುಂಡಿ ಕ್ಷೇತ್ರಗಳಲ್ಲಿ ಇಂದು ಅಪರಾಹ್ನ 3 ಗಂಟೆಗೆ ಮತದಾನ ಮುಕ್ತಾಯವಾಗಲಿದ್ದು ಉಳಿದ ಕ್ಷೇತ್ರಗಳಲ್ಲಿ ಸಂಜೆ 5 ಗಂಟೆಯವರೆಗೆ ನಡೆಯಲಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link