ವಿಜಯಪುರ:
ಮುಂಬೈನಲ್ಲಿರುವ ಅತೃಪ್ತ ಶಾಸಕರ ಪೈಕಿ ಇಬ್ಬರು ಸಿಎಲ್‌ಪಿ ನಾಯಕ ಸಿದ್ದರಾಮಯ್ಯ ಅವರನ್ನು ಸಂಪರ್ಕಿಸುತ್ತಿದ್ದಾರೆ ಎಂದು ಮಾಜಿ ಗೃಹಸಚಿವ ಎಂಬಿ ಪಾಟೀಲ್ ಹೊಸ ಬಾಂಬ್ ಸಿಡಿಸಿದ್ದಾರೆ.
ವಿಜಯಪುರದಲ್ಲಿ ಮಾತನಾಡಿದ ಅವರು, ‘ಇಬ್ಬರು ಅತೃಪ್ತ ಶಾಸಕರು ಸಿದ್ದರಾಮಯ್ಯ ಅವರಿಗೆ ನಿರಂತರವಾಗಿ ಕರೆಗಳನ್ನು ಮಾಡುತ್ತಿದ್ದಾರೆ. ಆದರೆ, ಸಿದ್ದರಾಮಯ್ಯ ಆ ಕರೆಗಳನ್ನು ಸ್ವೀಕರಿಸುತ್ತಿಲ್ಲ’ ಎಂದು ಹೇಳಿದರು. ಈಗ ರಚನೆಯಾಗಿರುವ ಸರ್ಕಾರ ಅನೈತಿಕವಾದುದು. ಯಡಿಯೂರಪ್ಪ ಅವರು ದುರಾಸೆಯಿಂದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಯಡಿಯೂರಪ್ಪ ತಮ್ಮ ರಾಜೀಕೀಯ ಜೀವನದ ಕಟ್ಟಕಡೆಯ ಹಂತದಲ್ಲಿದ್ದಾರೆ. ತಾಳ್ಮೆ ವಹಿಸಿ ಚುನಾವಣೆಯಲ್ಲಿ ದೊಡ್ಡ ಸಂಖ್ಯೆಯಲ್ಲಿ ಗೆದ್ದು ಮುಖ್ಯಮಂತ್ರಿಯಾಗುವ ವಿಶ್ವಾಸ ಅವರಲ್ಲಿಲ್ಲ. ಈ ಸರ್ಕಾರ ಆರು ತಿಂಗಳಿನಿಂದ ಒಂದು ವರ್ಷವಷ್ಟೇ ಆಯಸ್ಸು ಹೊಂದಿದೆ ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ