ನವದೆಹಲಿ :
ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಉಗ್ರರ ದಾಳಿಯಲ್ಲಿ 40 ಮಂದಿ ಯೋಧರು ಹುತಾತ್ಮರಾಗಿ ಇಂದಿಗೆ ಒಂದು ವರ್ಷವಾಗಿದೆ.
ಈ ಸಂದರ್ಭದಲ್ಲಿ ಹುತಾತ್ಮ ಯೋಧರಿಗೆ ದೇಶಾದ್ಯಂತ ಗೌರವ ನಮನ ಸಲ್ಲಿಸಲಾಗುತ್ತಿದ್ದು, ಉಗ್ರರ ದಾಳಿ ನಡೆದು ಒಂದು ವರ್ಷವಾದ ಹಿನ್ನೆಲೆಯಲ್ಲಿ ಇಂದು ವಿವಿಧೆಡೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಲಾಗುತ್ತಿದೆ.
ಸಿಆರ್‌ಪಿಎಫ್ ಯೋಧರ ಮೇಲೆ ಕಾಶ್ಮೀರದ ಪುಲ್ವಾಮಾದಲ್ಲಿ ಆತ್ಮಾಹತ್ಯಾ ಬಾಂಬರ್ ನಡೆಸಿದ ದಾಳಿ ನಿಜಕ್ಕೂ ಇಡೀ ದೇಶವನ್ನೇ ಭೀತಿಗೊಳಿಸಿತ್ತು. ಪಾಕಿಸ್ತಾನ ಮೂಲದ ಉಗ್ರ ಸಂಘಟನೆಯಾದ ಜೈಷ್ ಎ ಮೊಹಮದ್ಗೆ ಸೇರಿದ ಆದಿಲ್ ಅಹ್ಮದ್ ದಾರ್ ಎಂಬಾತ, ಸ್ಫೋಟಕ ತುಂಬಿದ ವಾಹನವನ್ನು ಸಿಆರ್‌ಪಿಎಫ್ ವಾಹನಕ್ಕೆ ಡಿಕ್ಕಿ ಹೊಡೆಸಿ, ಸ್ಫೋಟ ಮಾಡಲಾಗಿತ್ತು. 40 ಭಾರತೀಯ ಸೇನಾ ಯೋಧರು ಹುತಾತ್ಮರಾಗಿದ್ದರು.
ಯೋಧರು ಹುತಾತ್ಮರಾದ ಬಳಿಕ ದೇಶದಲ್ಲಿ ಸಾಕಷ್ಟು ಬದಲಾವಣೆ ಆಗಿದೆ. ಆದರೆ ಮೋಸದ ದಾಳಿಗೆ ಬಲಿಯಾದ ಯೋಧರ ವಿಚಾರದಲ್ಲಿ ಯಾವುದೇ ಪ್ರಗತಿ ಕಾಣದಿರುವುದು ನೊಂದ ಕುಟುಂಬಗಳ ದುಃಖ ಇಮ್ಮಡಿಸುವಂತೆ ಮಾಡಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ