ಅಂಬಾಲಾ (ಹರಿಯಾಣ):
ಬಹುನಿರೀಕ್ಷಿತ 5 ರಫೇಲ್ ಜೆಟ್ಗಳು ಹರಿಯಾಣದ ಅಂಬಾಲಾ ವಾಯುನೆಲೆಗೆ ಆಗಮಿಸಿದ್ದು ಸುರಕ್ಷಿತವಾಗಿ ಲ್ಯಾಂಡ್ ಆಗಿವೆ.
ಭಾರತೀಯ ವಾಯುಪಡೆಯ ಮುಖ್ಯಸ್ಥ ಏರ್ ಮಾರ್ಷಲ್ ರಾಕೇಶ್ ಕುಮಾರ್ ಸಿಂಗ್ ಭದೌರಿಯಾ (ಆರ್‌ಕೆಎಸ್ ಭದೌರಿಯಾ) ವಿಮಾನಗಳನ್ನು ಬರಮಾಡಿಕೊಂಡಿದ್ದಾರೆ.
The Birds have landed safely in Ambala. The touch down of Rafale combat aircraft in India marks the beginning of a new era in our Military History. These multirole aircraft will revolutionise the capabilities of the Indian Air Force: Defence Minister Rajnath Singh https://t.co/5K0H6Fgmx5 pic.twitter.com/Dp2LXVyYxO
— ANI (@ANI) July 29, 2020
ಫ್ರಾನ್ಸ್ ಮೂಲದ ಡಸಾಲ್ಟ್ ಕಂಪೆನಿ ನಿರ್ಮಿತ 5 ರಾಫೆಲ್ ಫೈಟರ್ ಜೆಟ್ ವಿಮಾನಗಳು ಇದಾಗಿದ್ದು, ಈ ಐದು ಯುದ್ಧ ವಿಮಾನಗಳ ಪೈಕಿ ಎರಡು ವಿಮಾನಗಳು 2 ಸೀಟರ್ ತರಬೇತಿ ವಿಮಾನಗಳಾಗಿದ್ದು, 3 ಸಿಂಗಲ್ ಸೀಟರ್ ಫೈಟರ್ ಜೆಟ್ ಗಳಾಗಿವೆ.
#WATCH: Five #Rafale jets in the Indian airspace, flanked by two Su-30MKIs (Source: Raksha Mantri's Office) pic.twitter.com/hCoybNQQOv
— ANI (@ANI) July 29, 2020
ವಾಯುನೆಲೆ ಸುತ್ತ ಮುನ್ನೆಚ್ಚರಿಕಾ ಕ್ರಮವಾಗಿ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದ್ದು, ಪಕ್ಕದ ನಾಲ್ಕು ಹಳ್ಳಿಗಳಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದ್ದು, ಯುದ್ಧ ವಿಮಾನಗಳು ಬಂದಿಳಿಯುವ ದೃಶ್ಯ ಸೆರೆ ಹಿಡಿಯುವುದನ್ನು ನಿಷೇಧಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ