ದೆಹಲಿ:

ಸಿಬಿಐ ನಿರ್ದೇಶಕ ಅಲೋಕ್ ಕುಮಾರ್ ವರ್ಮಾ ಅವರನ್ನು ಕಡ್ಡಾಯ ರಜೆಯ ಮೇಲೆ ಕಳುಹಿಸಿರುವುದನ್ನು ವಿರೋಧಿಸಿ ದೆಹಲಿಯ ಸಿಬಿಐ ಮುಖ್ಯಕಚೇರಿಯ ಮುಂಭಾಗಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಇತರೆ ನಾಯಕರನ್ನು ಲೋಧಿ ಕಾಲೋನಿ ಪೊಲೀಸರು ಬಂಧಿಸಿ, ಬಿಡುಗಡೆ ಮಾಡಿದ್ದಾರೆ.
ಬಿಡುಗಡೆಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಅವರು ಕೇವಲ ಸಿಬಿಐ ಅಧಿಕಾರಿಗಳನ್ನು ಮಾತ್ರ ಬದಲಾಯಿಸಬಹುದು. ಆದರೆ ಸತ್ಯವು ಕೊನೆಗೆ ಹೊರ ಬರಲಿದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
ಸಿಬಿಐ, ಚುನಾವಣಾ ಆಯೋಗ ಮತ್ತು ಜಾರಿ ನಿರ್ದೇಶನಾಲಯದಲ್ಲಿ ಪ್ರಧಾನಿ ಮೋದಿ ಹಸ್ತಕ್ಷೇಪ ಮಾಡುತ್ತಿದ್ದಾರೆ, ಸಿಬಿಐ ಅನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಎಂದು ರಾಹುಲ್ ದೂರಿದ್ದಾರೆ.








