‘ರಕ್ತದೊತ್ತಡ’ದಲ್ಲಿ ಏರುಪೇರು : ನಟ ರಜನಿಕಾಂತ್ ಆಸ್ಪತ್ರೆಗೆ ದಾಖಲು

ಚೈನ್ನೈ : 

     ರಕ್ತದೊತ್ತಡದಲ್ಲಿ ತೀವ್ರ ಏರುಪೇರು ಕಂಡು ಬಂದ ಹಿನ್ನೆಲೆಯಲ್ಲಿ ಸೂಪರ್ ಸ್ಟಾರ್ ರಜನಿಕಾಂತ್ ಅವರು ಆಸ್ಪತ್ರೆಗೆ ದಾಖಲಿಸಲಾಗಿ, ಚಿಕಿತ್ಸೆ ಪಡೆಯುತ್ತಿದ್ದಾರೆ.

     ಈ ಕುರಿತಂತೆ ನಟ ರಜನಿಕಾಂತ್ ಕಚೇರಿಯಿಂದ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ರಕ್ತದೊತ್ತಡದಲ್ಲಿ ತೀವ್ರ ಏರುಪೇರು ಕಂಡು ಬಂದ ಹಿನ್ನೆಲೆಯಲ್ಲಿ ರಜನಿಕಾಂತ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಶುಕ್ರವಾರ ತಿಳಿಸಿದೆ.

     ಹೈದರಾಬಾದ್ ನಲ್ಲಿ ಶೂಟಿಂಗ್ ನಲ್ಲಿ ಪಾಲ್ಗೊಂಡಿದ್ದ ರಜನಿಕಾಂತ್ ನಾಲ್ವರು ಸಿಬ್ಬಂದಿಗೆ ಕೋವಿಡ್ ಪಾಸಿಟಿವ್ ಕಂಡುಬಂದ ಹಿನ್ನಲೆಯಲ್ಲಿ ಚಿತ್ರೀಕರಣ ಸ್ಥಗಿತಗೊಳಿಸಿದ್ದರು.   ಹೈದರಾಬಾದ್ ನ ಅಪೊಲೊ ಆಸ್ಪತ್ರೆಗಳು ನೀಡಿರುವ ಹೇಳಿಕೆಯ ಪ್ರಕಾರ, ರಜನಿಕಾಂತ್ ಅವರು ಮಂಗಳವಾರ ಕೋವಿಡ್ ನೆಗೆಟಿವ್ ಎಂಬುದಾಗಿ ತಿಳಿಸಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap