ಬೆಂಗಳೂರು :
ರಾಜ್ಯದಲ್ಲಿ ಯಾವೊಬ್ಬ ಕಾಂಗ್ರೆಸ್ ಅಭ್ಯರ್ಥಿ ಪರವೂ ಪ್ರಚಾರಕ್ಕೆ ಬಾರದ ಮಾಜಿ ಸಂಸದೆ ರಮ್ಯಾ ಸದ್ಯ ಕೇರಳದ ವಯನಾಡ್ ಕ್ಷೇತ್ರದಲ್ಲಿ ರಾಹುಲ್ ಗಾಂಧಿ ಪರ ಪ್ರಚಾರದಲ್ಲಿ ತೊಡಗಿದ್ದಾರೆ ಎನ್ನಲಾಗಿದೆ.
ಮಂಡ್ಯದ ಮಾಜಿ ಸಂಸದೆ, ಕಳೆದ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಣಕ್ಕೆ ಇಳಿದಿದ್ದ ರಮ್ಯಾ 2018ರ ವಿಧಾನಸಭಾ ಚುನಾವಣೆಯ ವೇಳೆ ಪ್ರಚಾರಕ್ಕೆ ಬಂದಿರಲಿಲ್ಲ. ಹೀಗಾಗಿ ಈ ಬಾರಿ ಪ್ರಚಾರಕ್ಕೆ ಬರುತ್ತಾರಾ ಎನ್ನುವ ಪ್ರಶ್ನೆ ಎದ್ದಿತ್ತು. ಆದರೆ ಚುನಾವಣೆಯ ದಿನಾಂಕ ಹತ್ತಿರ ಬಂದರೂ ರಮ್ಯಾ ಮಾತ್ರ ರಾಜ್ಯದ ಕಡೆ ತಲೆ ಹಾಕಿಲ್ಲ. ಹೀಗಾಗಿ ರಮ್ಯಾ ಈಗ ಏನು ಮಾಡುತ್ತಿದ್ದಾರೆ ಎನ್ನುವ ಪ್ರಶ್ನೆ ಎದ್ದಿತ್ತು.
ಈ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದ್ದು, ರಮ್ಯಾ ಈಗ ರಾಹುಲ್ ಗಾಂಧಿ ಸ್ಪರ್ಧಿಸುತ್ತಿರುವ ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ರಾಹುಲ್ ಪರ ಪ್ರಚಾರ ನಡೆಸುತ್ತಿದ್ದಾರೆ. ವಯನಾಡಿನಲ್ಲಿ ಸೋಷಿಯಲ್ ಮೀಡಿಯಾ ಟೀಮ್ ಜೊತೆ ಫುಲ್ ಬ್ಯುಸಿಯಾಗಿದ್ದಾರೆ.
ರಾಹುಲ್ ಗಾಂಧಿ ಗೆಲುವಿಗಾಗಿ ಭರ್ಜರಿ ರಣತಂತ್ರ ರೂಪಿಸಲು ರಮ್ಯಾ ಅವರು ಸೋಶಿಯಲ್ ಮೀಡಿಯಾ ಟೀಂ ಜೊತೆ ಸರಣಿ ಸಭೆಗಳನ್ನು ಮಾಡುತ್ತಿದ್ದಾರೆ ಎನ್ನಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ