100 ರೂ. ನೋಟುಗಳ ಚಲಾವಣೆ ಮಾರ್ಚ್’ನಿಂದ ಸ್ಥಗಿತ!!!

ಮಂಗಳೂರು :  

      100 ರೂಪಾಯಿ ಮುಖಬೆಲೆಯ ಹಳೆಯ ನೋಟುಗಳನ್ನು ಹಂತಹಂತವಾಗಿ ಹಿಂಪಡೆದು ಮಾರ್ಚ್ ವೇಳೆಗೆ ಸಂಪೂರ್ಣವಾಗಿ ರದ್ದು ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

       ಹೌದು, ನಕಲಿ ನೋಟುಗಳ ಹಾವಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರೂ.100ರ ಮುಖಬೆಲೆಯ ಹಳೆಯ ಸೀರಿಸ್’ನ ನೋಟುಗಳನ್ನು ಹಿಂಪಡೆಯಲಾಗುತ್ತಿದೆ. ಹಳೆಯ ಸೀರಿಸ್ ಹೊಂದಿರುವ 100ರ ಕರೆನ್ಸಿ ನೋಟುಗಳನ್ನು ಮಾರ್ಚ್ ಅಂತ್ಯದ ವೇಳೆಗೆ ಸಂಪೂರ್ಣವಾಗಿ ಹಿಂಪಡೆಯುವ ನಿರ್ಧಾರಕ್ಕೆ ಬರಲಾಗಿದೆ. ಕಳೆದ 6 ವರ್ಷಗಳಿಂದ ಈ ನೋಟುಗಳು ಮುದ್ರಣವಾಗುತ್ತಿಲ್ಲ. ಆದರೆ, ಈ ಹಿಂದೆಯೇ ಮುದ್ರಣಗೊಂಡಿರುವ ಈ ನೋಟುಗಳನ್ನು ಸಂಪೂರ್ಣವಾಗಿ ಹಿಂಪಡೆಯುವುದು ಆರ್’ಬಿಐ ಉದ್ದೇಶವಾಗಿದೆ. 

     ನೋಟು ವಾಪಸ್ ಕಾರಣಕ್ಕೆ ಜನತೆ ಯಾವುದೇ ಕಾರಣಕ್ಕೂ ಭಯಪಡುವ ಅಗತ್ಯವಿಲ್ಲ. ಸ್ವಚ್ಛ ನೋಟುಗಳು ಜನತೆಯ ಕೈಗೆ ಸಿಗಬೇಕೆಂಬುದು ಮಾತ್ರ ಉದ್ದೇಶ. ಇದು ನೋಟು ಅಮಾನ್ಯೀಕರಣ ಎಂದು ಆರ್‌ಬಿಐ ಸಹಾಯಕ ಮಹಾಪ್ರಬಂಧಕ ಬಿ.ಎಂ.ಮಹೇಶ್ ತಿಳಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap