ಕಾಶ್ಮೀರದ ವಿಶೇಷ ಅಧಿಕಾರ ರದ್ದು : ಕೇಂದ್ರದ ಐತಿಹಾಸಿಕ ನಿರ್ಧಾರ!!

ನವದೆಹಲಿ:

      ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರ ವಿಶೇಷಾಧಿಕಾರ ನೀಡುವ ಸಂವಿಧಾನದ ಕಲಂ 370, 35ಎ ಅನ್ನು ರದ್ದು ಗೊಳಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಣೆ ಮಾಡಿದ್ದಾರೆ.

      ಇಂದು ರಾಜ್ಯಸಭೆಯಲ್ಲಿ ಇಂದು ಮಾತನಾಡಿದ ಅಮಿತ್ ಶಾ, ಕಾಶ್ಮೀರಕ್ಕೆ ನೀಡಿದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಲಾಗುವುದು ಎಂದು ಘೋಷಣೆ ಮಾಡಿದರು. ಪರಿಚ್ಛೇಧ 370 ಮತ್ತು 35(ಎ) ಅನ್ನು ರದ್ದುಗೊಳಿಸುವ ತಿದ್ದುಪಡಿ ವಿಧೇಯಕವನ್ನು ಮಂಡಿಸಿದ್ದಾರೆ. ಜಮ್ಮು ಕಾಶ್ಮೀರವನ್ನು ವಿಧಾನಸಭೆ ಇರುವ ಕೇಂದ್ರಾಡಳಿತ ಪ್ರದೇಶ ಹಾಗೂ ಲಡಾಕ್ ವಿಧಾನಸಭೆ ಇಲ್ಲದ ಕೇಂದ್ರಾಡಳಿತ ಪ್ರದೇಶ ಎಂದು ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.

      ಅಮಿತ್ ಶಾ ಮಾತು ಆರಂಭಿಸುತ್ತಿದ್ದಂತೆ ವಿಪಕ್ಷ ನಾಯಕ ಗುಲಾಂ ನಬಿ ಆಜಾದ್ ವಿರೋಧ ವ್ಯಕ್ತಪಡಿಸಿದರು. ಮಸೂದೆಗೂ ಮಂಡನೆಗೂ ಮುನ್ನ ಚರ್ಚೆ ನಡೆಯಬೇಕು. ಕಾಶ್ಮೀರದಲ್ಲಿ ಯುದ್ಧದ ಸನ್ನಿವೇಶ ನಿರ್ಮಾಣವಾಗಿದ್ದು, ಜನತೆ ಭಯಗೊಂಡಿದ್ದಾರೆ. ಮಾಜಿ ಮುಖ್ಯಮಂತ್ರಿಗಳನ್ನು ಸೇರಿದಂತೆ ಸ್ಥಳೀಯ ರಾಜಕೀಯ ನಾಯಕರನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ ಎಂದು ಅಸಮಧಾನ ವ್ಯಕ್ತಪಡಿಸಿದರು.

      ಕಾಂಗ್ರೆಸ್ ಮತ್ತು ಇತರ ಪಕ್ಷಗಳ ಸದಸ್ಯರು ಪ್ರತಿಭಟನೆ ಹಾಗೂ ಘೋಷಣೆ ಕೂಗುತ್ತಿರುವ ನಡುವೆಯೇ ಈ ಮಸೂದೆ ಮಂಡಿಸಲಾಗಿದೆ.

       ವಿಶೇಷಾಧಿಕಾರ ರದ್ದುಗೊಳಿಸುವ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ರಾಷ್ಟ್ರಪತಿ ರಾಮನಾಥ ಕೋವಿಂದ ಸಹಿಹಾಕಿದ್ದಾರೆ.

      ಇದುವರೆಗೂ ಜಮ್ಮು ಮತ್ತು ಕಾಶ್ಮೀರ ಒಂದು ರಾಜ್ಯವಾಗಿ ಕಾರ್ಯನಿರ್ವಹಿಸುತ್ತಿತ್ತು. ಆದರೆ, ಇನ್ನು ಮುಂದೆ ಜಮ್ಮು, ಕಾಶ್ಮೀರ ಮತ್ತು ಲಡಾಖ್​ ಕೇಂದ್ರಾಡಳಿತ ಪ್ರದೇಶಗಳಾಗಿ ಕಾರ್ಯನಿರ್ವಹಿಸಲಿವೆ. ಜಮ್ಮು ಮತ್ತು ಕಾಶ್ಮೀರ ಮಸೂದೆ ಮೂಲಕ ಕೇಂದ್ರಾಡಳಿತ ಪ್ರದೇಶದ ಸ್ಥಾನಮಾನ ಪಡೆದುಕೊಳ್ಳಲಿದ್ದರೆ, ಮಸೂದೆಯ ಬೆಂಬಲವಿಲ್ಲದೆ ಲಡಾಖ್​ ಕೇಂದ್ರಾಡಳಿತ ಪ್ರದೇಶವಾಗಲಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

 

 

 

Recent Articles

spot_img

Related Stories

Share via
Copy link
Powered by Social Snap