ಶ್ರೀನಗರ:
ಪಾಕ್ ಸೇನೆಯು ಗಡಿನಿಯಂತ್ರಣ ರೇಖೆ ಬಳಿ ಕದನವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸಿದ ಪರಿಣಾಮ ಭಾರತೀಯ ಸೇನೆಯ ರೈಫಲ್ ಮನ್ ಕರಮಜೀತ್ ಸಿಂಗ್ ಹುತಾತ್ಮರಾಗಿದ್ದಾರೆ.
ಸೋಮವಾರ ಬೆಳಗ್ಗೆ ಜಮ್ಮು ಕಾಶ್ಮೀರದ ರಾಜೌರಿಯ ಗಡಿನಿಯಂತ್ರಣ ರೇಖೆ ಬಳಿ ಕೆರಿ ಬಟ್ಟಾಲ್ ಆಫ್ ಸುಂದರ್ಬಾನಿ ಸೆಕ್ಟರ್ ಬಳಿ ಪಾಕ್ ಸೇನೆ ನಡೆಸಿದ ಅಪ್ರಚೋದಿತ ಮೋರ್ಟರ್ ಶೆೆಲ್ ಹಾಗೂ ಸಣ್ಣ ಶಸ್ತ್ರಾಸ್ತ್ರಗಳ ದಾಳಿಗೆ ಭಾರತದ ಓರ್ವ ಸೈನಿಕ ಹುತಾತ್ಮರಾದರೆ, ಇತರ ಮೂವರು ಗಾಯಗೊಂಡಿದ್ದಾರೆ.
ಪಾಕ್ ನ ಅಪ್ರಚೋದಿತ ಗುಂಡಿನ ದಾಳಿಗೆ ಭಾರತೀಯ ಸೇನೆ ತಕ್ಕ ಉತ್ತರ ನೀಡಿದ್ದು, ಬೆಳಗ್ಗೆ 7:15ರ ಸುಮಾರಿಗೆ ಗುಂಡಿನ ಚಕಮಕಿ ನಿಂತಿದೆ ಎಂದು ರಕ್ಷಣಾ ಸಚಿವಾಲಯದ ವಕ್ತಾರ ಲೆಫ್ಟಿನೆಂಟ್ ಕರ್ನಲ್ ದೇವೇಂದರ್ ಆನಂದ್ ಹೇಳಿದ್ದಾರೆ.
ಪಾಕಿಸ್ತಾನವು ನಿರಂತರವಾಗಿ ಕದನವಿರಾಮ ಉಲ್ಲಂಘನೆ ಮಾಡುತ್ತಿದ್ದು, ಭಾರತದ ಎಚ್ಚರಿಕೆಯನ್ನು ಧಿಕ್ಕರಿಸಿ ಸತತ ಶೆಲ್ ದಾಳಿ ನಡೆಸುತ್ತಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ