ಬಸ್-ಟ್ರಕ್ ನಡುವೆ ಭೀಕರ ಅಪಘಾತ : 10 ಮಂದಿ ಸಾವು!!

ರೇವಾ :

      ಟ್ರಕ್​ ಮತ್ತು ಬಸ್​​ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 15 ಮಂದಿ ದಾರುಣವಾಗಿ ಸಾವನ್ನಪ್ಪಿರುವ ದುರ್ಘಟನೆಮಧ್ಯಪ್ರದೇಶದ ರೇವಾದಲ್ಲಿ ಮುಂಜಾನೆ ನಡೆದಿದೆ.

    ರೇವಾದಿಂದ ಸಿಧಿ ಜಿಲ್ಲೆಗೆ ತೆರಳುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ನಿಂತಿದ್ದ ಟ್ರಕ್‍ಗೆ ಹಿಂದಿನಿಂದ ಅಪ್ಪಳಿಸಿ ಈ ದುರಂತ ಸಂಭವಿಸಿದ್ದು, ಈ ದುರ್ಘಟನೆಯಲ್ಲಿ 15 ಮಂದಿ ಸಾವನ್ನಪ್ಪಿದ್ದರೆ, ಹಲವರು ಬಸ್​ನ ಅಡಿ ಸಿಲುಕಿಕೊಂಡಿದ್ದರು. ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ.

    ಗಂಭೀರವಾಗಿ ಗಾಯಗೊಂಡಿರುವ ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ಸೇರಿಸಲಾಗಿದೆ. ಇಬ್ಬರ ಸ್ಥಿತಿ ಶೋಚನೀಯವಾಗಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap