ರೇವಾ :
ಟ್ರಕ್ ಮತ್ತು ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 15 ಮಂದಿ ದಾರುಣವಾಗಿ ಸಾವನ್ನಪ್ಪಿರುವ ದುರ್ಘಟನೆಮಧ್ಯಪ್ರದೇಶದ ರೇವಾದಲ್ಲಿ ಮುಂಜಾನೆ ನಡೆದಿದೆ.
ರೇವಾದಿಂದ ಸಿಧಿ ಜಿಲ್ಲೆಗೆ ತೆರಳುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ನಿಂತಿದ್ದ ಟ್ರಕ್‍ಗೆ ಹಿಂದಿನಿಂದ ಅಪ್ಪಳಿಸಿ ಈ ದುರಂತ ಸಂಭವಿಸಿದ್ದು, ಈ ದುರ್ಘಟನೆಯಲ್ಲಿ 15 ಮಂದಿ ಸಾವನ್ನಪ್ಪಿದ್ದರೆ, ಹಲವರು ಬಸ್ನ ಅಡಿ ಸಿಲುಕಿಕೊಂಡಿದ್ದರು. ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ.
#UPDATE: Superintendent of Police, Rewa: Death toll in the collision between a truck and a bus, has risen to nine. 23 people have been injured, and are undergoing treatment at a hospital. https://t.co/IvYaoVl5e9
— ANI (@ANI) December 5, 2019
ಗಂಭೀರವಾಗಿ ಗಾಯಗೊಂಡಿರುವ ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ಸೇರಿಸಲಾಗಿದೆ. ಇಬ್ಬರ ಸ್ಥಿತಿ ಶೋಚನೀಯವಾಗಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
