ಪ್ರತಾಪಗಡ :
ಕಾರು ಹಾಗೂ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿರುವ ಘಟನೆ ಪ್ರತಾಪಗಡದ ರಾಷ್ಟ್ರೀಯ ಹೆದ್ದಾರಿ 113ರ ಬನ್ಸ್ವಾರ ರಸ್ತೆಯ ಪಡಲಿಯಾ ಗ್ರಾಮದ ಬಳಿ ನಡೆದಿದೆ.
ಘಟನೆಯಲ್ಲಿ ಬನ್ಸ್ವಾರದ ಪೊಲೀಸ್ ಇನ್ಸ್ಪೆಕ್ಟರ್ ಅಖಿಲೇಶ್ ಸಿಂಗ್, ಕಾನ್ಸ್ಟೇಬಲ್ ಹಾಗೂ ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ. ಅಪಘಾತದ ಬಳಿಕ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.
ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಕಾರಿನಲ್ಲಿ ಮದ್ಯದ ಬಾಟಲ್ ಮತ್ತು ತಂಪು ಪಾನೀಯ ಬಾಟಲಿ ಸಹ ಪತ್ತೆಯಾಗಿದೆ. ಮೂಲಗಳ ಪ್ರಕಾರ, ಕಾರು ಸವಾರ ಬನ್ಸ್ವಾರ ಸಿಐ ಅಖಿಲೇಶ್ ಸಿಂಗ್ ಮತ್ತು ಅವರ ಸಹ ಪ್ರಯಾಣಿಕರು ಮದ್ಯ ಸೇವಿಸಿದ್ದರು ಎನ್ನಲಾಗಿದೆ.
ಘಟನೆ ಮಾಹಿತಿ ತಿಳಿದು ಸುಹಾಗ್‌ಪುರ ಎಸ್‌ಹೆಚ್‌ಒ ಹಿಮ್ಮತ್ ಸಿಂಗ್ ಕೂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ