ಬಸ್ – ಟೆಂಪೋ ಮುಖಾಮುಖಿ : 8 ಮಂದಿ ದುರ್ಮರಣ!!

ಜೈಪುರ್ :

      ಬಸ್​ ಮತ್ತು ಟೆಂಪೋ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ, 8 ಮಂದಿ ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಸಿಕರ್​ ಜಿಲ್ಲೆಯಲ್ಲಿ ನಡೆದಿದೆ.

      ಸಂತೋಷಪುರದಲ್ಲಿ ಬಸ್​ ಮತ್ತು ಟೆಂಪೋ ಮುಖಾಮುಖಿ ಡಿಕ್ಕಿಯಾಗಿದ್ದು 8 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು ದುರ್ಘಟನೆಯಲ್ಲಿ 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

      ಸುದ್ದಿ ತಿಳಿದ ಅಧಿಕಾರಿಗಳು ಘಟನಾ ಸ್ಥಳಕ್ಕೆ ದೌಡಾಯಿಸಿ ರಕ್ಷಣಾ ಕಾರ್ಯ ಕೈಗೊಂಡಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link