ವದೆಹಲಿ:
ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು 2.50 ರೂ. ಇಳಿಕೆ ಮಾಡಿರುವುದಾಗಿ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ತಿಳಿಸಿದ್ದಾರೆ.
ಇಂದು ಪ್ರಧಾನಿ ಮೋದಿಯೊಂದಿಗೆ ತುರ್ತು ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ, ಸುಂಕ ಇಳಿಕೆ ಬಗ್ಗೆ ಘೋಷಣೆ ಮಾಡಿದ್ದಾರೆ.
ಅಬಕಾರಿ ಸುಂಕವನ್ನು ಒಂದೂವರೆ ರೂಪಾಯಿ ಇಳಿಕೆ ಮಾಡಲಾಗುತ್ತದೆ. ಆಯಿಲ್ ಮಾರ್ಕೆಟಿಂಗ್ ಕಂಪೆನಿಗಳು 1 ರೂಪಾಯಿ ಇಳಿಸಲಿದ್ದಾರೆ. ಒಟ್ಟಾರೆ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಎರಡೂವರೆ ರೂಪಾಯಿ ಕಡಿಮೆಯಾಗಲಿದೆ ಎಂದು ತಿಳಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿನಿತ್ಯ ಏರಿಕೆ ಕಂಡು ಗ್ರಾಹಕರಿಗೆ ಹೊರೆಯಾಗಿತ್ತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
