ಮಾಸ್ಕೋ :
ಕೊರೊನಾ ವೈರಸ್ ನಿರೋಧಕ ಮೊದಲ ಹಂತದ ಲಸಿಕೆ ಎರಡು ವಾರದಲ್ಲಿ ಲಭ್ಯವಾಗಲಿದೆ ಎಂದು ಹೇಳಿದೆ.
ಜಗತ್ತಿನಾದ್ಯಂತ ಕೋವಿಡ್ 19 ಸೋಂಕು ಹರಡುತ್ತಿದ್ದು, ಇದಕ್ಕಾಗಿ ಹಲವಾರು ದೇಶಗಳು ಲಸಿಕೆ ಕಂಡುಹಿಡಿಯುವ ಪ್ರಯತ್ನದಲ್ಲಿವೆ. ಈ ಮಧ್ಯೆ ರಷ್ಯಾ ಕೋವಿಡ್ 19 ಸೋಂಕಿಗೆ ಲಸಿಕೆ ಕಂಡುಹಿಡಿದಿರುವುದಾಗಿ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಮಂಗಳವಾರ (ಆಗಸ್ಟ್ 11ಮ 2020) ಘೋಷಿಸಿದ್ದಾರೆ.
ಲಸಿಕೆ ಬಗ್ಗೆ ಯಾವುದೇ ಅನುಮಾನ ಬೇಡ ಎಂದು ವಿಶ್ವ ಸಮುದಾಯಕ್ಕೆ ಭರವಸೆ ನೀಡಿರುವ ರಷ್ಯಾ, ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಕೋವಿಡ್ ಲಸಿಕೆ ಕಂಡು ಹಿಡಿದ ಮೊದಲ ದೇಶ ನಮ್ಮದು ಎಂದು ಹೇಳಿದ್ದರು. ಅಲ್ಲದೇ ಸ್ವತಃ ಅಧ್ಯಕ್ಷ ಪುಟಿನ್ ಅವರ ಮಗಳ ಮೇಲೆಯೇ ಈ ಲಸಿಕೆಯ ಪ್ರಯೋಗ ನಡೆಸಲಾಗಿದೆ.
ಈ ಲಸಿಕೆ ಸಾಕಷ್ಟು ಪರಿಣಾಮಕಾರಿಯಾಗಿದ್ದು, ರೋಗ ನಿರೋಧ ಶಕ್ತಿಯು ಸ್ಥಿರವಾಗಿರುವಂತೆ ಮಾಡುತ್ತದೆ ಎಂದು ವಿವರಿಸಿದ್ದಾರೆ.ಈಗಾಗಲೇ ರಷ್ಯಾ ಲಸಿಕೆ ಉತ್ಪಾದನೆಯಲ್ಲಿ ತೊಡಗಿದ್ದು, ದೊಡ್ಡ ಪ್ರಮಾಣದಲ್ಲಿ ಲಸಿಕೆ ಉತ್ಪಾದನೆ ನಮ್ಮ ಗುರಿಯಾಗಿದೆ ಎಂದು ಅಧ್ಯಕ್ಷ ಪುಟಿನ್ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
