ಸಾತ್ನಾ :
ಡಂಪರ್ ಟ್ರಕ್ ಗೆ ಜೀಪ್ ಡಿಕ್ಕಿ ಹೊಡೆದು ಭೀಕರ ರಸ್ತೆ ಅಪಘಾತ ಸಂಭವಿಸಿ, ಮಗು ಸೇರಿದಂತೆ ಒಂದೇ ಕುಟುಂಬದ 7 ಮಂದಿ ಸಾವಿಗೀಡಾಗಿರುವ ಘಟನೆ ಮಧ್ಯಪ್ರದೇಶದ ಸತ್ನಾ ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ.
ಪನ್ನಾದಲ್ಲಿ ನಡೆದ ಕೌಟುಂಬಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಸಂತ್ರಸ್ತರು ರೇವಾಗೆ ಹಿಂದಿರುಗುತ್ತಿದ್ದರು ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶೈಲೇಂದ್ರ ಕುಮಾರ್ ಜೈನ್ ತಿಳಿಸಿದ್ದಾರೆ.
ಜಿಲ್ಲಾ ಕೇಂದ್ರದಿಂದ 20 ಕಿ.ಮೀ ದೂರದಲ್ಲಿರುವ ಸತ್ನಾ-ನಾಗೋಡ್ ರಸ್ತೆಯಲ್ಲಿ ಬೆಳಗ್ಗೆ 8 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಆರು ಮಂದಿ ಸ್ಥಳದಲ್ಲೇ ಮೃತಪಟ್ಟರೆ, ಒಬ್ಬ ವ್ಯಕ್ತಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗಾಯಾಳುಗಳನ್ನು ರೇವಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ನಂತರ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
