ನವದೆಹಲಿ:
ಅಪರಾಧ ಪ್ರಕರಣಗಳಲ್ಲಿ ಆರೋಪ ಹೊತ್ತ ಶಾಸಕರು ಅಥವಾ ಸಂಸದರನ್ನು ಆರೋಪ ಸಾಬೀತಾಗುವ ಮೊದಲೇ ಅವರನ್ನು ಆ ಸಾಂವಿಧಾನಿಕ ಹುದ್ದೆಗಳಿಂದ ಅನರ್ಹಗೊಳಿಸಬಾರದು ಎಂದು ಸುಪ್ರೀಂ ಕೋರ್ಟ್, ಮಂಗಳವಾರ ಮಹತ್ವದ ತೀರ್ಪು ನೀಡಿದೆ.
ಆರೋಪ ಹೊತ್ತ ರಾಜಕಾರಣಿಗಳು ಶಾಸಕರಾಗಿ, ಸಂಸದರಾಗಿ ಮುಂದುವರಿಯಲು ಅವಕಾಶ ಕೊಡಬಾರದೆಂದು ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಕೆಯಾಗಿರುವ ವಿವಿಧ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿ ಕೋರ್ಟ್ ಈ ತೀರ್ಪು ನೀಡಿದೆ.
ಜನರೇ ತೀರ್ಮಾನಿಸಲಿ:
ಭ್ರಷ್ಟಾಚಾರ ಎಂಬುದು ಆರ್ಥಿಕ ಭಯೋತ್ಪಾದನೆಯಾಗಿದೆ. ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿರುವವರನ್ನು ಜನರೇ ಅವರ ಹಣೆಬರಹವನ್ನು ತೀರ್ಮಾನಿಸಬೇಕೆಂದು ಐವರು ನ್ಯಾಯಾಧೀಶರು ಅವಿರೋಧವಾಗಿ ಒಮ್ಮತದ ತೀರ್ಪನ್ನು ಪ್ರಕಟಿಸಿದರು.
ಇದೇ ವೇಳೆ ಚುನಾವಣೆಗೆ ಸ್ಪರ್ಧಿಸುವ ಮುನ್ನ ಪ್ರತಿಯೊಬ್ಬ ಅಭ್ಯರ್ಥಿಗಳು ಕಡ್ಡಾಯವಾಗಿ ಅಫಿಡೆವಿಟ್‍ನಲ್ಲಿ ತಾವು ಎದುರಿಸುತ್ತಿರುವ ಕ್ರಿಮಿನಲ್ ಪ್ರಕರಣದ ಬಗ್ಗೆ ದಪ್ಪ ಅಕ್ಷರಗಳಲ್ಲಿ ನಮೂದಿಸಬೇಕೆಂದು ಸೂಚನೆ ಕೊಟ್ಟಿದೆ. ಅಭ್ಯರ್ಥಿಗಳು ತಮ್ಮ ಕ್ರಿಮಿನಲ್ ಹಿನ್ನಲೆಯ ಕುರಿತು ಚುನಾವಣ ಆಯೋಗ ಮತ್ತು ಮತದಾರರಿಗೆ ಸಾಮಾಜಿಕ ತಾಣಗಳ ಮೂಲಕ ಮಾಹಿತಿ ನೀಡಬೇಕು ಎಂದು ಕೋರ್ಟ್ ಹೇಳಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ