ನವದೆಹಲಿ:
ಭಾರತೀಯ ನೌಕಾಪಡೆಯ ಮಹಿಳಾ ಅಧಿಕಾರಿಗಳಿಗಾಗಿ ಶಾಶ್ವತ ಆಯೋಗ ಸ್ಥಾಪನೆ ಮಾಡಲಾಗುವುದೆಂದು ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ.
ಪುರುಷ ಮತ್ತು ಮಹಿಳಾ ಅಧಿಕಾರಿಗಳ ಮಧ್ಯೆ ಲಿಂಗ ತಾರತಮ್ಯ ತೋರದೆ ಸಮಾನವಾಗಿ ಕಾಣಬೇಕೆಂದು ಹೇಳಿರುವ ಸುಪ್ರೀಂ ಕೋರ್ಟ್ ನೌಕಾಪಡೆಯಲ್ಲಿ ಕೂಡ ಮಹಿಳಾ ಅಧಿಕಾರಿಗಳಿಗೆ ಶಾಶ್ವತ ಆಯೋಗ ಸ್ಥಾಪಿಸಬೇಕೆಂದು ಆದೇಶ ಹೊರಡಿಸಿದೆ.
ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರ ನೇತೃತ್ವದ ನ್ಯಾಯಪೀಠ, ದೇಶ ಸೇವೆಯನ್ನು ಮಾಡುವ ಮಹಿಳಾ ಅಧಿಕಾರಿಗಳಿಗೆ ಶಾಶ್ವತ ಆಯೋಗವನ್ನು ಸ್ಥಾಪಿಸದಿದ್ದರೆ ನ್ಯಾಯ ಒದಗಿಸಿದಂತೆ ಆಗುವುದಿಲ್ಲ. ನೌಕಾಪಡೆಯಲ್ಲಿ ಮಹಿಳಾ ಅಧಿಕಾರಿಗಳಿಗೆ ಲಿಂಗ ತಾರತಮ್ಯತೆ ತೋರಿಸಬಾರದು ಎಂದು ಹೇಳಿರುವ ಸುಪ್ರೀಂ, ಖಾಲಿ ಹುದ್ದೆಗಳ ಲಭ್ಯತೆಯ ಆಧಾರದ ಮೇಲೆ ಶಾಶ್ವತ ಆಯೋಗಕ್ಕಾಗಿ ಮಹಿಳಾ ಅಧಿಕಾರಿಗಳ ಅರ್ಜಿಗಳನ್ನು ಮೂರು ತಿಂಗಳೊಳಗೆ ಪರಿಗಣಿಸಬೇಕು ಎಂದು ನಿರ್ದೇಶಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ