ಭಾರತೀಯ ಸೇನೆಯಲ್ಲಿ ಮಹಿಳೆಯರಿಗೆ ಕಮಾಂಡರ್ ಹುದ್ದೆ!!

ದೆಹಲಿ :

      ಭಾರತೀಯ ಸೇನೆಯಲ್ಲಿ ಮಹಿಳೆಯರನ್ನು ಪುರುಷ ಅಧಿಕಾರಿಗಳಿಗೆ ಸಮನಾಗಿ ‘ಕಮಾಂಡ್ ನೇಮಕವನ್ನು’ ಅನುಮತಿಸಬೇಕು ಎಂದು  ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ.

      ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಮತ್ತು ಅಜಯ್ ರಸ್ತೊಗಿ ಅವರನ್ನೊಳಗೊಂಡ ನ್ಯಾಯಪೀಠ ಇಂದು ಈ ತೀರ್ಪು ನೀಡಿ, ತನ್ನ ಆದೇಶವನ್ನು ಜಾರಿಗೆ ತರಲು ಕೇದ್ರ ಸರ್ಕಾರಕ್ಕೆ ಮೂರು ತಿಂಗಳ ಸಮಯಾವಕಾಶ ನೀಡಿದೆ. ಅಲ್ಲದೆ ಸೇನೆಯಲ್ಲಿ ಪುರುಷ ಅಧಿಕಾರಿಗಳಿಗೆ ಸಮನಾಗಿ ಮಹಿಳಾ ಅಧಿಕಾರಿಗಳಿಗೆ ಏಕೆ ಅವಕಾಶ ನೀಡುತ್ತಿಲ್ಲ ಎಂದು ಪ್ರಶ್ನಿಸಿದೆ. ಸಾಮಾಜಿಕ ಕಟ್ಟುಪಾಡು, ಕೌಟುಂಬಿಕ ಜವಾಬ್ದಾರಿ, ಶಾರೀರಿಕ ಇತಿಮಿತಿಗಳಿಗೆ ಮಹಿಳಾ ಅಧಿಕಾರಿಗಳನ್ನು ಸೀಮಿತಗೊಳಿಸುವುದು ಸರಿಯಲ್ಲ ಎಂದು ಹೇಳಿದೆ.

      ಮಹಿಳಾ ಅಧಿಕಾರಿಗಳನ್ನು ಸೇನಾ ಘಟಕಗಳಲ್ಲಿ ಸ್ವೀಕರಿಸಲು ಸೈನಿಕರು ಇನ್ನೂ ಮಾನಸಿಕವಾಗಿ ಸಿದ್ಧವಿಲ್ಲ ಎಂದು ಸರ್ಕಾರ ನೀಡಿದ ವರದಿಗೆ, ಮಹಿಳೆಯರೂ ಪುರುಷರೊಂದಿಗೆ ಭುಜಕ್ಕೆ ಭುಜ ಕೊಟ್ಟು ಕೆಲಸ ಮಾಡುತ್ತಾರೆ. ಕೇಂದ್ರದ ಈ ವರದಿ ಲಿಂಗ ತಾರತಮ್ಯ ಮಾಡುತ್ತಿದೆ ಎಂದು ನ್ಯಾಯಮೂರ್ತಿಗಳಾದ ಡಿ.ವೈ. ಚಂದ್ರಚೂಡ್ ಮತ್ತು ಅಜಯ್ ರಸ್ತೋಗಿ ಹೇಳಿದರು.

      ಭಾರತೀಯ ಸೇನೆಯಲ್ಲಿ ಮಹಿಳಾ ಅಧಿಕಾರಿಗಳಿಗೆ ಕಮಾಂಡರ್ ಹುದ್ದೆ ನೀಡಬೇಕೆಂದು ದೆಹಲಿ ಹೈಕೋರ್ಟ್ ನೀಡಿರುವ ಆದೇಶವನ್ನು ಸುಪ್ರೀಂಕೋರ್ಟ್ ಸೋಮವಾರ ಎತ್ತಿಹಿಡಿದಿದ್ದು, ಮಹಿಳಾ ಅಧಿಕಾರಿಗಳನ್ನು ಕಮಾಂಡರ್ ಹುದ್ದೆಗೆ ನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ನೀಡಿರುವ ತೀರ್ಪನ್ನು ಜಾರಿಗೊಳಿಸದ ಕೇಂದ್ರ ಸರ್ಕಾರದ ಕ್ರಮವನ್ನು ಸುಪ್ರೀಂಕೋರ್ಟ್ ಟೀಕಿಸಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

      

Recent Articles

spot_img

Related Stories

Share via
Copy link
Powered by Social Snap