ಕಾಲುವೆಗೆ ಉರುಳಿದ ಶಾಲಾ ಬಸ್ : ವಿದ್ಯಾರ್ಥಿಗಳು ಗಂಭೀರ!!!

ಗುಂಟೂರು(ಅಂಧ್ರಪ್ರದೇಶ): 

      50 ಶಾಲಾ ಮಕ್ಕಳು ಇದ್ದ ಬಸ್​ವೊಂದು ಕಾಲುವೆಗೆ ಉರುಳಿ ಬಿದ್ದ ಪರಿಣಾಮ ಬಸ್ ನಲ್ಲಿದ್ದ ಎಲ್ಲಾ ಮಕ್ಕಳು ಗಾಯಗೊಂಡಿದ್ದು, ಮೂರು ಮಕ್ಕಳ ಸ್ಥಿತಿ ಗಂಭೀರವಾಗಿದೆ.

      ಗಾಯಾಳು ವಿದ್ಯಾರ್ಥಿಗಳನ್ನು ಸಮೀಪದ ಆಸ್ಪತ್ರೆಗೆ ಸೇರಿಸಲಾಗಿದ್ದು, ಆಸ್ಪತ್ರೆಯಲ್ಲಿ ಸೂಕ್ತ ವೈದ್ಯಕೀಯ ಸಿಬಂದಿಗಳು ಇಲ್ಲದಿದ್ದ ಕಾರಣ ಸ್ವೀಪರ್‌ಗಳೇ ಮಕ್ಕಳಿಗೆ ಚಿಕಿತ್ಸೆ ನೀಡುತ್ತಿದ್ದುದು ಕಂಡು ಬಂದಿದೆ. ಈ ಬಗ್ಗೆ ನಿರ್ಲಕ್ಷ್ಯದ ಕೇಸನ್ನು ದಾಖಲಿಸಲಾಗಿದೆ ಎಂದು ಕೆಲವು ಮಾಧ್ಯಮ ವರದಿಗಳು ತಿಳಿಸಿವೆ.

      ಘಟನೆ ನಡೆದ ಸಂದರ್ಭದಲ್ಲಿ ಚಾಲಕ ಪಾನಮತ್ತನಾಗಿ ವಾಹನ ಚಲಾಯಿಸುತ್ತಿದ್ದ ಎಂದು ಹೇಳಲಾಗಿದೆ. ಸದ್ಯ ಚಾಲಕನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ಪ್ರಶ್ನಿಸುತ್ತಿದ್ದಾರೆ.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ