ಮಂಗಳೂರು:
ಅಯೋಧ್ಯೆಯಲ್ಲಿ ನಾಳೆ ರಾಮಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಲಿದ್ದು, ಈ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಮಂಗಳೂರು ನಗರ ಪೊಲೀಸ್ ಆಯುಕ್ತರು ಈ ಕುರಿತು ಆದೇಶ ಹೊರಡಿಸಿದ್ದು, ಅಯೋಧ್ಯೆಯಲ್ಲಿ ನಾಳೆ ರಾಮಮಂದಿರ ಭೂಮಿ ಪೂಜೆ ಇರುವುದರಿಂದ ಮಂಗಳೂರಿನಲ್ಲಿ ನಾಳೆ ಹಿಂದೂಪರ ಸಂಘಟನೆಗಳು, ಸಾರ್ವಜನಿಕರು ವಿಶೇಷ ಪೂಜೆ, ಕಾರ್ಯಕ್ರಮಗಳನ್ನು ಆಯೋಜಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅಹಿತಕರ ಘಟನೆ ನಡೆಯುವ ಸಾಧ್ಯತೆ ಇರುವುದರಿಂದ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಇಂದು ರಾತ್ರಿ 8 ಗಂಟೆಯಿಂದ ಆಗಸ್ಟ್ 6 ರ ಬೆಳಗ್ಗೆ 6 ಗಂಟೆಯವರೆಗೆ ಮಂಗಳೂರು ನಗರ ವ್ಯಾಪ್ತಿಯಲ್ಲಿ 5 ಕ್ಕಿಂತ ಹೆಚ್ಚು ಜನರು ಸೇರುವಂತಿಲ್ಲ. ಕತ್ತಿ, ಶಸ್ತ್ರಾಸ್ತ್ರಗಳು, ಚಾಕು, ಕಲ್ಲು ಮುಂತಾದವುಗಳನ್ನು ಹಿಡಿದು ಸಂಚರಿಸುವಂತಿಲ್ಲ, ಪ್ರತಿಭಟನೆ ನಡೆಸುವಂತಿಲ್ಲ ಎಂದು ಪೊಲೀಸ್ ಆಯುಕ್ತರು ಸೂಚನೆ ನೀಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ