ಎನ್ ಕೌಂಟರ್ : ಮೂವರು ನಕ್ಸಲರ ಹತ್ಯೆ!!

ರಾಂಚಿ:

      ಇಂದು(ಮಂಗಳವಾರ) ಬೆಳ್ಳಂಬೆಳಗ್ಗೆಯೇ ಜಾರ್ಖಂಡ್ ನಲ್ಲಿ ನಕ್ಸಲರು ಮತ್ತು ಭದ್ರತಾ ಸಿಬ್ಬಂದಿಗಳ ನಡುವೆ ಭೀಕರ ಎನ್ ಕೌಂಟರ್ ಸಂಭವಿಸಿದ್ದು, ಘಟನೆಯಲ್ಲಿ ಮೂವರು ನಕ್ಸಲೀಯರು ಹತರಾಗಿದ್ದಾರೆ ಎನ್ನಲಾಗಿದೆ.

      ಸಿಂಗ್ ಭೂಮ್ ನ ಹೊರವಲಯದ ಅರಣ್ಯ ಪ್ರದೇಶದಲ್ಲಿ ಕಳೆದ ಹಲವು ದಿನಗಳಿಂದ ನಕ್ಸಲ್ ಚಟುವಟಿಕೆ ನಡೆಯುತ್ತಿದ್ದ ಖಚಿತ ಮಾಹಿತಿ  ಪಡೆದ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿವೆ.

       ಭದ್ರತಾ ಪಡೆಗಳತ್ತ ನಕ್ಸಲೀಯರು ಗುಂಡಿನ ದಾಳಿ ನಡೆಸಿದ್ದು, ಭದ್ರತಾ ಸಿಬ್ಬಂದಿ ಕೂಡ ಪ್ರತಿದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಭದ್ರತಾ ಪಡೆಯ ಹಲವು ಯೋಧರೂ ಕೂಡ ಗಾಯಗೊಂಡಿದ್ದು ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಅಧಿಕಾರಿಗಳಿಂದ ತಿಳಿದುಬಂದಿದೆ. 

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

 

Recent Articles

spot_img

Related Stories

Share via
Copy link