ಆಟೋ-ಕಾರು ಮುಖಾಮುಖಿ ಡಿಕ್ಕಿ : ಸ್ಥಳದಲ್ಲೇ 7 ಮಂದಿಯ ದುರ್ಮರಣ

 ಪಶ್ಚಿಮ ಬಂಗಾಳ :

     ಆಟೋ ಮತ್ತು ಕಾರಿನ ನಡುವೆ ಡಿಕ್ಕಿಯಾಗಿ ಸ್ಥಳದಲ್ಲೇ ಏಳು ಮಂದಿ ಮೃತಪಟ್ಟಿರುವ ಘಟನೆ ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ ಜಿಲ್ಲೆಯಲ್ಲಿ ನಡೆದಿದೆ.

      ಜಿಲ್ಲೆಯ ಸೂಟಿ ಪ್ರದೇಶದ ರಾಷ್ಟ್ರೀಯ ಹೆದ್ದಾರಿ 34ರಲ್ಲಿ ಅಪಘಾತ ಸಂಭವಿಸಿದ್ದು, ಅಪಘಾತದ ರಭಸಕ್ಕೆ ಎರಡೂ ವಾಹನಗಳು ಸಂಪೂರ್ಣ ನಜ್ಜುಗುಜ್ಜಾಗಿವೆ.

      ಮೃತರ ಪೈಕಿ ಆಟೋ ಚಾಲಕ ಫಿರೋಜ್ ಶೇಖ್ (26) ಹಾಗೂ ಅಜ್ಫರುಲ್ ಶೇಖ್ (24) ಎಂಬವರನ್ನು ಮಾತ್ರ ಗುರುತಿಸಲಾಗಿದೆ. ಉಳಿದವರ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಇನ್ನೂ ಅಪಘಾತದಲ್ಲಿ 15 ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link