ಆಂಧ್ರ ಪ್ರದೇಶ :
ನಿಯಂತ್ರಣ ತಪ್ಪಿದ ವ್ಯಾನ್ ಕಮರಿಗೆ ಉರುಳಿ ಬಿದ್ದು 7 ಮಂದಿ ಸಾವನ್ನಪ್ಪಿರುವ ಘಟನೆ ನಸುಕಿನ ಜಾವ 3.30ರ ಸುಮಾರಿಗೆ ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ತಂಟಿಕೊಂಡ ಬಳಿ ನಡೆದಿದೆ.
ಮದುವೆ ಮುಗಿಸಿಕೊಂಡು ವಾಪಸ್ ಬರುತ್ತಿದ್ದ ವೇಳೆ ವ್ಯಾನ್ ನ ಬ್ರೇಕ್ ಫೇಲ್ ಆದ ಕಾರಣ ಚಾಲಕನ ನಿಯಂತ್ರಣ ತಪ್ಪಿ ವ್ಯಾನ್ ಬೆಟ್ಟದಿಂದ ಉರುಳಿ ಬಿದ್ದ ಪರಿಣಾಮ ಈ ಅವಘಡ ಸಂಭವಿಸಿದೆ.
ಅಪಘಾತದಿಂದ 7 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೃತರನ್ನು ಗೋಕವರಂ ವಲಯದ ತಕುರ್ಪಲೆಂ ಗ್ರಾಮಕ್ಕೆ ಸೇರಿದವರು ಎಂದು ಗುರುತಿಸಲಾಗಿದೆ. ಘಟನೆಯ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/10/accdnt-andhra.jpg)