7 ತಿಂಗಳ ಬಳಿಕ ಭಕ್ತರಿಗೆ ಶಬರಿಮಲೆ ಅಯ್ಯಪ್ಪನ ದರ್ಶನ!!

ಶಬರಿಮಲೆ :

     ಪ್ರಸಿದ್ಧ ಯಾತ್ರಾಸ್ಥಳ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದ ಬಾಗಿಲು ಬರೋಬ್ಬರಿ 7 ತಿಂಗಳ ಬಳಿಕ ತೆರೆದಿದೆ.

     ನಿನ್ನೆ ದೇವಾಲಯದ ಬಾಗಿಲು ತೆರೆಯಲಾಗಿದ್ದು, ಇಂದು ಬೆಳಗ್ಗೆಯಿಂದ ದೇಗುಲದೊಳಗೆ ಸಾರ್ವಜನಿಕರ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ.

    ಕೊರೊನಾ ಹಿನ್ನೆಲೆಯಲ್ಲಿ ಕೋವಿಡ್ ನಿಯಮಾನುಸಾರವಾಗಿ ದೇವಾಲಯದಲ್ಲಿ ಸಾಮಾಜಿಕ ಅಂತರ, ಮಾಸ್ಕ್ ಹಾಗೂ ಕೊವಿಡ್ ಟೆಸ್ಟ್ ಕಡ್ಡಾಯವಾಗಿದ್ದು, ನೆಗೆಟಿವ್ ವರದಿ ಬಂದವರಿಗೆ ಮಾತ್ರ ದೇವಾಲಯ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತಿದೆ.

     ಪ್ರತಿ ದಿನ 250 ಭಕ್ತರಿಗೆ ಮಾತ್ರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಈಗಾಗಲೇ ಹಲವು ಭಕ್ತರು ಅಯ್ಯಪ್ಪ ಸ್ವಾಮಿ ದರ್ಶನ ಪಡೆದಿದ್ದಾರೆ.

     ಇನ್ನು ಭಕ್ತರು ಪಂಪಾ ನದಿಯಲ್ಲಿ ಸ್ನಾನ ಮಾಡುವುದನ್ನು ನಿರ್ಬಂಧಿಸಲಾಗಿದ್ದು, ನದಿಯಲ್ಲಿ ಸ್ನಾನದ ಬದಲಾಗಿ ಏರುಮಲೈನಲ್ಲಿ ಶವರ್ ವ್ಯವಸ್ಥೆ ಮಾಡಲಾಗಿದೆ. ದೇವಾಲಯದ ಆವರಣದಲ್ಲಿ ರಾತ್ರಿ ಭಕ್ತರು ತಂಗಲು ಅವಕಾಶವಿಲ್ಲ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap