ದೇವಸ್ಥಾನದಲ್ಲಿ ಆಯತಪ್ಪಿ ಬಿದ್ದ ತರೂರ್ ತಲೆಗೆ 6 ಹೊಲಿಗೆ!!

0
25

ತಿರುವನಂತಪುರಂ:

      ಮಾಜಿ ಸಚಿವ, ಹಾಲಿ ಸಂಸದ ಶಶಿ ತರೂರ್ ಅವರ ತಲೆಗೆ ಗಂಭೀರ ಗಾಯವಾಗಿದ್ದು, 6 ಹೊಲಿಗೆ ಹಾಕಲಾಗಿದೆ ಎಂದು ತಿಳಿದುಬಂದಿದೆ.

      ಶಶಿ ತರೂರ್ ಅವರು ಗಾಂಧಾರಿ ಅಮನ್ ಕೋವಿಲ್ ದೇವಸ್ಥಾನದಲ್ಲಿ ಇಂದು ತುಲಾಭಾರ ಸೇವೆ ನಡೆಸುತ್ತಿದ್ದಾಗ ತೂಕದ ಹಣ್ಣು ಅರ್ಪಣೆಗೆ ಮುಂದಾಗಿದ್ದರು. ಈ ವೇಳೆ ಅವರು ಕುಳಿತಿದ್ದ ತಕ್ಕಡಿ ಕಿತ್ತು ಬಿದ್ದ ಪರಿಣಾಮ ಆಯತಪ್ಪಿ ತುಲಾಭಾರದ ತಕ್ಕಡಿಯಿಂದ ಕೆಳಗೆ ಬಿದ್ದು ತಲೆಗೆ ತೀವ್ರವಾಗಿ ಪೆಟ್ಟಾಗಿ, ರಕ್ತಸ್ರಾವವಾಗಿದೆ.

       ತಕ್ಷಣ ಅವರನ್ನು ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಪರೀಕ್ಷೆ ನಡೆಸಿದ ವೈದ್ಯರು ತಲೆಗೆ 6 ಹೊಲಿಗೆಗಳನ್ನು ಹಾಕಿದ್ದಾರೆ. ತರೂರ್ ಅವರ ಕಾಲಿಗೂ ಸಹ ತೀವ್ರ ಪೆಟ್ಟಾಗಿದೆ. ಯಾವುದೇ ಪ್ರಾಣಾಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. 

      ನಂತರ ಅವರನ್ನು ಸೂಪರ್​ ಸ್ಪೆಷಾಲಿಟಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಸದ್ಯ ಶಶಿ ತರೂರ್ ಅವರಿಗೆ ವಿಶ್ರಾಂತಿ ಪಡೆಯಲು ಸೂಚಿಸಿದ್ದು, ಆದರೆ ಚುನಾವಣೆ ಹಿನ್ನಲೆಯಲ್ಲಿ ಇದು ಸಾಧ್ಯವಾಗುವುದಿಲ್ಲವೆಂದು ತಿಳಿಸಿದ್ದಾರೆನ್ನಲಾಗಿದೆ.

       ಶಶಿ ತರೂರ್ ಅವರು ತಿರುವನಂತಪುರಂ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದು ಪ್ರಚಾರ ಕಾರ್ಯಕ್ರಮದಲ್ಲಿ ನಿರತರಾಗಿದ್ದರು. ಆದರೆ ಇಂದು ಗಾಯಗೊಂಡ ಕಾರಣ ಪ್ರಚಾರ ಕಾರ್ಯಕ್ರಮವನ್ನು ರದ್ದು ಮಾಡಲಾಗಿದೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

LEAVE A REPLY

Please enter your comment!
Please enter your name here