ನವದೆಹಲಿ:
ಹೃದಯಾಘಾತದಿಂದ ನಿನ್ನೆ ನಿಧನರಾದ ದೆಹಲಿ ಮಾಜಿ ಸಿಎಂ ಶೀಲಾ ದೀಕ್ಷಿತ್ ರವರ ಅಂತ್ಯ ಸಂಸ್ಕಾರ ಇಂದು ಮಧ್ಯಾಹ್ನ ನಡೆಯಲಿದೆ.
ಪ್ರಧಾನಿ ಮೋದಿ, ಸುಷ್ಮಾ ಸ್ವರಾಜ್, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮನಮೋಹನ್ ಸಿಂಗ್ ಸೇರಿದಂತೆ ಹಲವು ಗಣ್ಯರು ಅಗಲಿದ ನಾಯಕಿಯ ಅಂತಿಮ ದರ್ಶನ ಪಡೆದಿದ್ದಾರೆ.

ಇಂದು ಬೆಳಗ್ಗೆ ಮೃತದೇಹವನ್ನು ಕಾಂಗ್ರೆಸ್ ಮುಖ್ಯ ಕಚೇರಿಗೆ ಕೊಂಡೊಯ್ಯಲಾಗಿದ್ದು, ಅಲ್ಲಿ ಅಂತಿಮ ನಮನ ಸಲ್ಲಿಸಲು ಅವಕಾಶ ನೀಡಲಾಗುತ್ತದೆ. ಶೀಲಾ ದೀಕ್ಷಿತ್ ನಿಧನದ ಹಿನ್ನೆಲೆಯಲ್ಲಿ ದೆಹಲಿ ಸರ್ಕಾರ ಎರಡು ದಿನಗಳ ಕಾಲ ಶೋಕಾಚರಣೆ ಘೋಷಿಸಿದೆ.
ನಂತರ ಮಧ್ಯಾಹ್ನ 2.30ಕ್ಕೆ ನಿಗಂ ಬೋಧ್ ಘಾಟ್ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅವರ ಅಂತ್ಯಕ್ರಿಯೆ ನಡೆಯಲಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
